ಭಯೋತ್ಪಾದನೆ ವಿರುದ್ಧದ ಹೋರಾಟ ಬಡವಾಗಲು ಕಾಂಗ್ರೆಸ್ ಕಾರಣ:ರಾಜನಾಥ್ ಸಿಂಗ್
ಭಯೋತ್ಪಾದನೆ ವಿರುದ್ಧ ಹೋರಾಟ ಬಡವಾಗಲು ಕಾಂಗ್ರೆಸ್ ಕಾರಣ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.

ನವದೆಹಲಿ: ಭಯೋತ್ಪಾದನೆ ವಿರುದ್ಧ ಹೋರಾಟ ಬಡವಾಗಲು ಕಾಂಗ್ರೆಸ್ ಕಾರಣ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ, ಹಿಂದೂ ಭಯೋತ್ಪಾದನೆ ಎಂಬ ಶಬ್ದವನ್ನು ಪರಿಚಯಿಸಿದ್ದರಿಂದ, ಭಯೋತ್ಪಾದನೆ ವಿರುದ್ಧದ ಹೋರಾಟ ದುರ್ಬಲಗೊಂಡಿದೆ ಎಂದು ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಗುರ್ದಾಸ್ ಪುರದಲ್ಲಿ ನಡೆದ ಭಯೋತ್ಪಾದನಾ ದಾಳಿ ಬಗ್ಗೆ ಲೋಕಸಭೆಯಲ್ಲಿ ಶುಕ್ರವಾರ ಹೇಳಿಕೆ ನೀಡಿದ ರಾಜನಾಥ್ ಸಿಂಗ್, ಭಯೋತ್ಪಾದನೆ ವಿಷಯದ ಚರ್ಚೆ ವೇಳೆಯಲ್ಲೂ ಒಗ್ಗಟ್ಟಿನಿಂದಿರದ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜನಾಥ್ ಸಿಂಗ್ ಗುರುವಾರ ರಾಜ್ಯಸಭೆಯಲ್ಲಿ ಹೇಳಿಕೆ ನಿಡಿದಾಗಲೂ ಪ್ರತಿಪಕ್ಷಗಳು ಚರ್ಚೆಗೆ ಅಡ್ಡಿ ಉಂಟು ಮಾಡಿದ್ದವು. ಸಂಸತ್ ಅಧಿವೇಶನ ಪ್ರಾರಂಭವಾದ ದಿನದಿಂದಲೂ ವ್ಯಾಪಂ ಹಗರಣ, ಲಲಿತ್ ಮೋದಿ ಪ್ರಕರಣದ ಬಗ್ಗೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಭದ್ರತೆ ವಿಷಯ ಚರ್ಚೆಗೆ ಬಂದಾಗಲೂ ಕಾಂಗ್ರೆಸ್ ಪ್ರತಿಭಟನೆ ಕೈಬಿಡದೆ ಇರುವುದಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಆಕ್ರೋಶಗೊಂಡಿದ್ದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಯೋತ್ಪಾದನೆ ವಿಷಯದಲ್ಲಿ ದೇಶದ ಜನತೆ ಹಾಗೂ ಜನಪ್ರತಿನಿಧಿಗಳು ಒಗ್ಗಟ್ಟಾಗಿರಬೇಕು. ಆದರೆ ಕಾಂಗ್ರೆಸ್ ಸದಸ್ಯರು ಮಾತ್ರ ಭದ್ರತೆ ವಿಷಯವನ್ನು ಬದಿಗಿರಿಸಿ ಪ್ರತಿಭಟನೆ ನದೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದನೆ ಪ್ರಕರಣಗಳ ತಂಖೆಯ ದಿಕ್ಕು ತಪ್ಪಿಸಲು 2013 ರಲ್ಲಿ ಅಂದಿನ ಗೃಹ ಸಚಿವ ಪಿ ಚಿದಂಬರಂ ಹಿಂದೂ ಭಯೋತ್ಪಾದನೆ ಎಂಬ ಹೊಸ ಪದವನ್ನು ಸಂಸತ್ ನಲ್ಲೇ ಹೇಳುವ ಮೂಲಕ ಪರಿಚಯಿಸಿದ್ದರು. ಅದು ಉಗ್ರರ ವಿರುದ್ಧದ ಹೋರಾಟವನ್ನು ದುರ್ಬಲಗೊಳಿಸಿದೆ, ಹಿಂದೂ ಭಯೋತ್ಪಾದನೆ ಎಂಬ ಶಬ್ದವನ್ನು ಪರಿಚಯಿಸಿದ್ದ ಈ ಹಿಂದಿನ ಗೃಹ ಸಚಿವ ಚಿದಂಬರಂ ಗೆ ಉಗ್ರ ಹಫೀಜ್ ಸಯೀದ್ ಅಭಿನಂದನೆ ಸಲ್ಲಿಸಿದ್ದ. ಆದರೆ ನಮ್ಮ ಸರ್ಕಾರ ಇಂತಹ ನಾಚಿಕೆಗೇಡಿನ ಪರಿಸ್ಥಿತಿಯನ್ನು ಸೃಷ್ಟಿಸುವುದಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


