ಪ್ರಧಾನ ಸುದ್ದಿ

ಜಯಾ ಪ್ರಕರಣದ ವಿಚಾರಣೆಗೆ ಖರ್ಚಾದ 5.11 ಕೋಟಿ ರೂಪಾಯಿ ಕೇಳಲು ಮುಂದಾದ ಕರ್ನಾಟಕ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ಖರ್ಚಾದ 5. 11 ಕೋಟಿ ರುಪಾಯಿ ಮರು ಪಾವತಿ ಮಾಡುವಂತೆ...

ಜಯಾ ಪ್ರಕರಣದ ವಿಚಾರಣೆಗೆ ಖರ್ಚಾದ 5.11 ಕೋಟಿ ರೂಪಾಯಿ ಕೇಳಲು ಮುಂದಾದ ಕರ್ನಾಟಕ
ಜಯಲಲಿತಾ
Published On :

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ಖರ್ಚಾದ 5. 11 ಕೋಟಿ ರುಪಾಯಿ ಮರು ಪಾವತಿ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಕೇಳುವುದಾಗಿ ಗುರುವಾರ ಕರ್ನಾಟಕ ಸರ್ಕಾರ ತಿಳಿಸಿದೆ.

'ಬೆಂಗಳೂರಿನಲ್ಲಿ ಜಯಾ ಪ್ರಕರಣದ ವಿಚಾರಣೆಗಾಗಿ ಕರ್ನಾಟಕ ಸರ್ಕಾರ ಮಾಡಿದ 5.11 ಕೋಟಿ ರುಪಾಯಿ ವೆಚ್ಚವನ್ನು ಮರು ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಲಾಗುವುದು' ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಜಯಲಲಿತಾ ಅವರ ಭದ್ರತೆಗಾಗಿ ಗೃಹ ಇಲಾಖೆ ಮಾಡಿದ ವೆಚ್ಚವನ್ನು ಸಹ ಭರಿಸುವಂತೆ ತಮಿಳುನಾಡು ಸರ್ಕಾರಕ್ಕೆ ಕೇಳಲಾಗುವುದು ಎಂದು ಜಯಚಂದ್ರ ಅವರು ಹೇಳಿದ್ದಾರೆ.

ತಮಿಳುನಾಡಿನಲ್ಲಿ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ ಎಂಬ ಕಾರಣಕ್ಕೆ ಜಯಲಲಿತಾ ಅವರ ಪ್ರಕರಣವನ್ನು ಸುಪ್ರೀಂ ಕೋರ್ಟ್ ನವೆಂಬರ್ 18, 2003ರಲ್ಲಿ ಬೆಂಗಳೂರಿಗೆ ವರ್ಗಾಯಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.