ಪೊಲೀಸ್ ಮತ್ತು ಸಿಖ್ ಸಮುದಾಯ ಘರ್ಷಣೆ; ಜಮ್ಮುವಿನಲ್ಲಿ ಸೆಕ್ಷನ್ ೧೪೪ ಜಾರಿ
ಜಮ್ಮುವಿನಲ್ಲಿ ನಡೆದ ಸಿಖ್ ಸಮುದಾಯ ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಯ ಹಿನ್ನಲೆಯಲ್ಲಿ ನಗರದಲ್ಲಿ ಸೆಕ್ಷನ್ ೧೪೪ ಜಾರಿ ಮಾಡಿದ್ದು ನಾಲ್ಕು

ಜಮ್ಮು: ಜಮ್ಮುವಿನಲ್ಲಿ ನಡೆದ ಸಿಖ್ ಸಮುದಾಯ ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಯ ಹಿನ್ನಲೆಯಲ್ಲಿ ನಗರದಲ್ಲಿ ಸೆಕ್ಷನ್ ೧೪೪ ಜಾರಿ ಮಾಡಿದ್ದು ನಾಲ್ಕು ಜನ್ನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
"ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆ ಇಡೀ ಜಿಲ್ಲೆಯಲ್ಲಿ ಸೆಕ್ಷನ್ ೧೪೪ ಜಾರಿ ಮಾಡಿದ್ದೇವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಸೇನೆ ಜಾಗರೂಗವಾಗಿದೆ" ಎಂದು ಹೆಚ್ಚುವರಿ ಉಪ ಮಹಾ ನಿರ್ದೇಶಕ ರಿಫಾತ್ ಕೊಹ್ಲಿ ತಿಳಿಸಿದ್ದಾರೆ.
"ಸೆಕ್ಷನ್ ೧೪೪ ಜಾರಿಯಾಗಿದ್ದು ನಾಲ್ಕು ಜನಕ್ಕಿಂತಲೂ ಹೆಚ್ಚು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ" ಎಂದು ಅವರು ತಿಳಿಸಿದ್ದಾರೆ.
ಜಮ್ಮುವಿನ ಸತ್ವಾರಿ ಪ್ರದೇಶದಲ್ಲಿ ಸಿಖ್ ಸಮುದಾಯದ ಸದಸ್ಯರು ಪೊಲೀಸರೊಂದಿಗೆ ನಡೆಸಿದ ಘರ್ಷಣೆಯಲ್ಲಿ ಗುರುವಾರ ಕನಿಷ್ಠ ಒಬ್ಬ ನಾಗರಿಕ ಮೃತಪಟ್ಟಿದ್ದು ಕೆಲವು ಪೋಲಿಸರನ್ನು ಒಳಗೊಂಡಂತೆ ೨೫ ಜನಕ್ಕೂ ಹೆಚ್ಚು ಗಾಯಗೊಂಡಿದ್ದಾರೆ.
ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಅವರ ಜಾಹಿರಾತು ಫಲಕವನ್ನು ತೆಗೆದುಹಾಕಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲಿ ಈ ಘರ್ಷಣೆ ನಡೆದು ಹಿಂಸೆಯ ರೂಪ ತಾಳಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


