ಪ್ರಧಾನ ಸುದ್ದಿ

ಲೋಕಾ ದಾಳಿ: ಎಎಸ್ಐ ಹೆಸರಲ್ಲಿ 51 ಮನೆ, 4 ಕಾರು ಪತ್ತೆ

ಲೋಕಾಯುಕ್ತ ಪೊಲೀಸರು ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು...

ಲೋಕಾ ದಾಳಿ: ಎಎಸ್ಐ ಹೆಸರಲ್ಲಿ 51 ಮನೆ, 4 ಕಾರು ಪತ್ತೆ
ಲೋಕಾಯುಕ್ತ ದಾಳಿ
Published On :

ಬೆಂಗಳೂರು: ಲೋಕಾಯುಕ್ತ ಪೊಲೀಸರು ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಿಡದಿ ಠಾಣೆ ಎಎಸ್ಐ ಜಗದೀಶ್ ಅವರ ಮನೆ ದಾಳಿ ಮಾಡಿದ ಲೋಕಯುಕ್ತ ಪೊಲೀಸರು ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ.

ಜಗದೀಶ್ ಅವರ ಹೆಸರಲ್ಲಿ ಸುಮಾರು 51 ಮನೆಗಳ ಬೃಹತ್ ಅಪಾರ್ಟ್‌ಮೆಂಟ್ ಇರುವ ವಿಷಯ ಬಹಿರಂಗವಾಗಿದೆ. ಅಲ್ಲದೆ ಅವರ ಬಳಿ 4 ಕಾರು, 2 ಬೈಕ್ ಗಳಿವೆ.

ಅಕ್ರಮ ಆಸ್ತಿಗಳಿಕೆ ದೂರಿನ ಹಿನ್ನಲೆಯಲ್ಲಿ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಬಾಗಲಕೋಟೆ, ಮಂಡ್ಯ ಜಿಲ್ಲೆಗಳ 8 ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆದಿದೆ. ಆಯಾ ಜಿಲ್ಲಾ ಎಸ್ಪಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ನ್ಯಾಯಾಂಗ ಬಡಾವಣೆಯಲ್ಲಿರುವ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ತ್ಯಾಗರಾಜ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಎಲ್ಲೆಲ್ಲಿ ದಾಳಿ
ರಾಮನಗರ: ಬಿಡದಿ ಠಾಣೆಯ ಎಎಸ್‌ಐ ಜಗದೀಶ್ ಅವರ ತಲಘಟ್ಟಪುರ ಸಮೀಪದ ರಘುವನಹಳ್ಳಿಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಬೆಳಗಾವಿ: ಚಿಕ್ಕೋಡಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಅಕೌಂಟ್ಸ್ ಸೂಪರ್‌ಟೆಂಡಟ್ ಕೃಷ್ಣ ಮಹದೇವಪ್ಪ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
* ಹಿರೇಬೂದಿ ಗ್ರಾಮದಲ್ಲಿ ವಿಲೇಜ್ ಅಕೌಂಡೆಟ್ ಸಿದ್ಧಾರ್ಥ ಅವರ ಮನೆಯ ಮೇಲೆ ದಾಳಿ ನಡೆದಿದೆ.
* ಸಹಕಾರಿ ಮಂಡಳಿ ಅಧ್ಯಕ್ಷ ನಾಗಯ್ಯ ಹಿರೇಮಠ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಬಾಗಲಕೋಟೆ: ಬಾಗಲಕೋಟೆಯಲ್ಲಿ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಮಲ್ಲಿಕಾರ್ಜುನ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ.
ಮಂಗಳೂರು: ಪುತ್ತೂರಿನಲ್ಲಿ ಪುತ್ತೂರು ವಲಯ ಅರಣ್ಯಾಧಿಕಾರಿ ಬಾಲಕೃಷ್ಣ ಅವರ ಮನೆಯ ಮೇಲೆ ದಾಳಿ ಮಾಡಲಾಗಿದೆ.
ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಅಣ್ಣೇಗೌಡ ಅವರ ನಿವಾದ ಮೇಲೆ ದಾಳಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.