ಪ್ರಧಾನ ಸುದ್ದಿ

ನಾನಿನ್ನೂ ಯುವಕ, ಬಿಜೆಪಿಗೆ ಸೆಡ್ಡು ಹೊಡೆಯಲು ಸಂಪೂರ್ಣ ಸಿದ್ಧ: ಲಾಲು

ನಾನಿನ್ನೂ ಯುವಕ ಮತ್ತು ಸೆಪ್ಟಂಬರ್-ಅಕ್ಟೋಬರ ಸಮಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ಎದುರಿಸಲು ಸಂಪೂರ್ಣ ಸಿದ್ಧನಿದ್ದೇನೆ

ನಾನಿನ್ನೂ ಯುವಕ, ಬಿಜೆಪಿಗೆ ಸೆಡ್ಡು ಹೊಡೆಯಲು ಸಂಪೂರ್ಣ ಸಿದ್ಧ: ಲಾಲು
ಆರ್ ಜೆ ಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್
Published On :

ಪಾಟ್ನಾ: ನಾನಿನ್ನೂ ಯುವಕ ಮತ್ತು ಸೆಪ್ಟಂಬರ್-ಅಕ್ಟೋಬರ ಸಮಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ಎದುರಿಸಲು ಸಂಪೂರ್ಣ ಸಿದ್ಧನಿದ್ದೇನೆ ಎಂದು ಆರ್ ಜೆ ಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಿಳಿಸಿದ್ದಾರೆ.

"ಕಳೆದ ವರ್ಷ ನನಗೆ ಪ್ರಮುಖ ಹೃದಯ ಶಸ್ತ್ರಚಿಕಿತ್ಸೆ ಆಗಿದ್ದರೂ ನಾನಿನ್ನೂ ಯುವಕ ಮತ್ತು ಸಂಪೂರ್ಣ ಶಕ್ತಿಯಿದೆ" ಎಂದು ಗುರುವಾರ ಹುಟ್ಟುಹಬ್ಬ ಆಚರಿಕೊಳ್ಳುತ್ತಿರುವ ೬೮ ವರ್ಷದ ಮಾಜಿ ಬಿಹಾರ ಮುಖ್ಯಮಂತ್ರಿ ಹೇಳಿದ್ದಾರೆ.

"ನನ್ನ ಆರೋಗ್ಯ ಹಿಂದಿರುಗಿರುವುದರಿಂದ ನಾನು ಭಾರತೀಯ ಜನತಾ ಪಕ್ಷ ಮತ್ತು ನರೇಂದ್ರ ಮೋದಿ ಅವರನ್ನು ಬರುವ ಚುನಾವಣೆಗಳಲ್ಲಿ ತೊಂದರೆಗೆ ಸಿಲುಕಿಸಲಿದ್ದೇನೆ" ಎಂದು ಆರ್ ಜೆ ಡಿ ಮುಖಂಡ ಮಾಜಿ ಕೆಂದ್ರ ರೈಲ್ವೇ ಸಚಿವ ಲಾಲು ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಿಂದ ತಡೆಯಲು ನಾವು ಸಂಯುಕ್ತ ಜನತಾದಳ, ಕಾಂಗ್ರೆಸ್ ಹಾಗು ರಾಷ್ಟ್ರೀಯ ಕಾಂಗ್ರೆಸ್ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದ್ದೇವೆ ಎಂದಿದ್ದಾರೆ.

"ಇಡೀ ದೇಶ ಬಿಹಾರದತ್ತ ಮುಖ ಮಾಡಿದೆ. ಚುನಾವಣೆ ಫಲಿತಾಂಶದಿಂದ ಬಿಜೆಪಿ ಮತ್ತು ಮೋದಿಯವರಿಗೆ ಮುಖಭಂಗವಾಗಲಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.