ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಅಲೋಕ್ ಕುಮಾರ್ ವರ್ಗಾವಣೆ
ಅಮಾನತು ಶಿಕ್ಷೆಗೆ ಒಳಗಾಗಿದ್ದ ಪಶ್ಚಿಮ ವಿಭಾಗದ ಐಜಿಪಿ ಮತ್ತು ಅಪರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ...

ಬೆಂಗಳೂರು: ಲಾಟರಿ ಅಕ್ರಮದ ಪ್ರಮುಖ ಆರೋಪಿಯೊಂದಿಗೆ ಸ್ನೇಹ ಹೊಂದಿದ್ದ ಆರೋಪದಲ್ಲಿ ಅಮಾನತು ಶಿಕ್ಷೆಗೆ ಒಳಗಾಗಿದ್ದ ಪಶ್ಚಿಮ ವಿಭಾಗದ ಐಜಿಪಿ ಮತ್ತು ಅಪರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಒಂದಂಕಿ ಲಾಟರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಾರಿರಾಜನ್ ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂಬ ಆರೋಪದ ಮೇರೆಗೆ ಅಮಾನತುಗೊಂಡಿದ್ದ ಅಲೋಕ್ ಕುಮಾರ್ ಅವರನ್ನು ಇಂದು ಮತ್ತೆ ಆಂತರಿಕ ಭದ್ರತಾ ವಿಭಾಗ ಐಜಿಪಿಯಾಗಿ ಸರ್ಕಾರ ವರ್ಗಾವಣೆಗೊಳಿಸಿದೆ. ಈ ಸಂಬಂಧ ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಅಮಾನತ್ತಿನಲ್ಲಿರುವ ಅಲೋಕ್ ಕುಮಾರ್ ಅವರ ವಿರುದ್ಧ ಆರೋಪಗಳು ಸುಳ್ಳಾಗಿ ಅವರ ಅಮಾನತು ರದ್ದುಗೊಂಡರೆ ಅವರು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಮುಂದುವರೆಯಲಿದ್ದಾರೆ ಎಂದು ತಿಳಿದುಬಂದಿದೆ.
ರೌಡಿ ಶೀಟರ್ ಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ (ಐಪಿಎಸ್) ಅಲೋಕ್ ಕುಮಾರ್ ಅವರನ್ನು ಅಮಾನತುಗೊಳಿಸಿ ಕಳೆದ ಮೇ.23ರಂದು ಸರಕಾರ ಆದೇಶ ಹೊರಡಿಸಿತ್ತು. ಒಂದಂಕಿ ಲಾಟರಿ ದಂಧೆಯ ವಿಚಾರದಲ್ಲಿ ಅಲೋಕ್ ಕುಮಾರ್ ಹೆಸರು ನೇರವಾಗಿ ಕೇಳಿ ಬಂದಿರುವ ಹಿನ್ನಲೆಯಲ್ಲಿ ಮುಂದಿನ ಆದೇಶದವರೆಗೆ ಸರಕಾರ ಅವರ ಸೇವೆಯನ್ನು ಹಿಂದಕ್ಕೆ ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


