ಪ್ರಧಾನ ಸುದ್ದಿ

ಶ್ರೀನಗರದಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ, ಎಲ್ಲ ಪ್ರಯಾಣಿಕರೂ ಸುರಕ್ಷಿತ

ಜಮ್ಮು ಶ್ರೀನಗರ ಮಾರ್ಗಮಧ್ಯದ ಏರ್ ಇಂಡಿಯಾ ವಿಮಾನದ ಪ್ರಯಾಣಿಕರು ಕೂದಲೆಳೆಯ ಅಂತರದಿಂದ ಬದುಕುಳಿದಿದ್ದಾರೆ.

ಶ್ರೀನಗರದಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ, ಎಲ್ಲ ಪ್ರಯಾಣಿಕರೂ ಸುರಕ್ಷಿತ
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಜಮ್ಮು ಶ್ರೀನಗರ ಮಾರ್ಗಮಧ್ಯದ ಏರ್ ಇಂಡಿಯಾ ವಿಮಾನದ ಪ್ರಯಾಣಿಕರು ಕೂದಲೆಳೆಯ ಅಂತರದಿಂದ ಬದುಕುಳಿದಿದ್ದಾರೆ. ಸೋಮವಾರ ವಿಮಾನ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಟೈರ್ ಸ್ಫೋಟಗೊಂಡಿದ್ದರೂ ಯಾರಿಗೂ ಹಾನಿಯಾಗಿಲ್ಲ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ೧೫೦ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏರ್ ಪೋರ್ಟ್ ನ ರನ್ ವೇ ಮಧ್ಯದಲ್ಲೇ ವಿಮಾನ ನಿಂತಿದ್ದು, ರನ್ ವೇ ಕೂಡ ಹಾನಿಗೊಂಡದ್ದರಿಂದ ಎಲ್ಲ ವಿಮಾನ ಹಾರಾಟಗಳನ್ನು ರದ್ದುಪಡಿಸಲಾಗಿದೆ.

ಶ್ರೀನಗರದಿಂದ ಹೊರಡಬೇಕಿದ್ದ ಎಲ್ಲ ವಿಮಾನಗಳು ತಡವಾಗಿ ಹೊರಡಲಿದ್ದು, ಶ್ರೀನಗರದಲ್ಲಿ ಇಳಿಯಬೇಕಿದ್ದ ಎಲ್ಲ ವಿಮಾನಗಳನ್ನು ಚಂಡೀಘರ್ ವಿಮಾನ ನಿಲ್ದಾಣದತ್ತ ತಿರುಗಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.