ಪ್ರಧಾನ ಸುದ್ದಿ

ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ರಾಮದೇವ್

ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾನುವಾರ ರಾಜಪಥದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು

ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ರಾಮದೇವ್
ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾನುವಾರ ರಾಜಪಥದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಪೂರ್ವಭಾವಿ ಯೋಗಾಭ್ಯಾಸ ಮಾಡುತ್ತಿರುವ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ ಖಟ್ಟರ್
Published On :

ನವದೆಹಲಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾನುವಾರ ರಾಜಪಥದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯೋಗ ಮಾಡುವುದಿಲ್ಲ ಬದಲಾಗಿ ನೆರೆದಿರುವವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೋದಿಯವರನ್ನು ಒಳಗೊಂಡಂತೆ ವೇದಿಕೆಯ ಮೇಲೆ ಜೂನ್ ೨೧ರಂದು ಏಳು ಜನ ನೆರೆದಿರುತ್ತಾರೆ ಅವರಲ್ಲಿ ಬಾಬ ರಾಮದೇವ್ ಕೂಡ ಒಬ್ಬರು.

ಜೂನ್ ೨೧ ಹತ್ತಿರವಾಗುತ್ತಿರುವಂತೆ ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಜನ ಯೋಗ ಮಾಡಿಲಿರುವುದರಿಂದ ಈ ಕಾರ್ಯಕ್ರಮವನ್ನು ಗಿನ್ನಿಸ್ ದಾಖಲೆ ಪುಸ್ತಕಕ್ಕೆ ಸೇರಿಸಲು ಸರ್ಕಾರ ಮನವಿ ಮಾಡಿದೆ. ೩೩ ನಿಮಿಷದ ಈ ಯೋಗ ಪ್ರದರ್ಶನದಲ್ಲಿ ೩೫ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೋದಿ ಅವರು ಅಂದು ಯೋಗ ಮಾಡುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ ಮತ್ತು ಮೂಲಗಳ ಪ್ರಕಾರ ಪ್ರಧಾನಿ ೧೫-೨೦ ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ.

ಆರು ಜನ ವೇದಿಕೆ ಮೇಲೆ ಮೋದಿಯವನ್ನು ಸೇರಲಿದ್ದಾರೆ ಎಂದು ತಿಳಿದುಬಂದಿದ್ದರೂ ರಾಮದೇವ್ ಅವರನ್ನು ಹೊರತುಪಡಿಸಿ ಉಳಿದವರ್ಯಾರು ಎಂಬುದು ಇನ್ನು ನಿಶ್ಚಿತವಾಗಿ ತಿಳಿದುಬಂದಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.