ನಿರ್ಮಾಪಕರ ಸಮಸ್ಯೆ ನಿವಾರಣೆಗೆ ಸರ್ಕಾರ ಸಿದ್ಧ: ರೋಷನ್ ಬೇಗ್
ಸ್ಯಾಂಡಲ್ ವುಡ್ ನಿರ್ಮಾಪಕರ ಸಮಸ್ಯೆಗಳನ್ನು ಈಡೇರಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಅವರ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ...

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕರ ಸಮಸ್ಯೆಗಳನ್ನು ಈಡೇರಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಅವರ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆದು ಶೀಘದಲ್ಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ರೋಷನ್ ಬೇಗ್ ನಿರ್ಮಾಪಕರ ಮನವೊಲಿಸಿದ್ದು, ನಿರ್ಮಾಪಕರು ಉಪವಾಸ ಸತ್ಯಾಗ್ರಹ ಹಿಂಪಡೆದಿದ್ದಾರೆ.
ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿದ ರೋಷನ್ ಬೇಗ್ ಕಲಾವಿದರು ಹಾಗೂ ನಿರ್ಮಾಪಕರ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಶೀಘ್ರದಲ್ಲೇ ಈ ಸಮಸ್ಯೆ ಪರಿಹರಿಸಲು ಸರ್ಕಾರ ಮಧ್ಯೆ ಪ್ರವೇಶಿಸಿ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸುವುದಾಗಿ ನೀಡಿ ಭರವಸೆ ಹಿನ್ನೆಲೆಯಲ್ಲಿ ನಿರ್ಮಾಪಕರು ತಾತ್ಕಾಲಿಕವಾಗಿ ಸತ್ಯಾಗ್ರಹ ಕೈಬಿಟ್ಟಿದ್ದಾರೆ. ಈ ವೇಳೆ ವಾಟಾಳ್ ನಾಗರಾಜ್, ಬಾಮಾ ಹರೀಶ್, ಸಾರಾ ಗೋವಿಂದ್, ಎಸ್ ನಾರಾಯಣ್ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


