ಪ್ರತಿಪಕ್ಷಗಳ ರಾಜಕೀಯ: ಪರಂ ಟೀಕೆ
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಮುಂದಿಟ್ಟು ಕೊಂಡು ಪ್ರತಿಪಕ್ಷಗಳು ರಾಜಕಾರಣ ನಡೆಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು...

ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಮುಂದಿಟ್ಟು ಕೊಂಡು ಪ್ರತಿಪಕ್ಷಗಳು ರಾಜಕಾರಣ ನಡೆಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು.
ಕಬ್ಬು ಬೆಳೆಗಾರರಿಗೆ ಇಡೀ ದೇಶದಲ್ಲೇ ಹೆಚ್ಚು ಪ್ರೊತ್ಸಾಹ ಧನ ನೀಡುತ್ತಿರುವುದು ಕರ್ನಾಟಕ. ಕೆಲವು ತಾಂತ್ರಿಕ ಕಾರಣಗಳಿಂದ ಬಾಕಿ ಹಣ ನೀಡುವುದಕ್ಕೆ ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಸರ್ಕಾರ ಆದಷ್ಟುಬೇಗ ಪರಿಹರಿಸುತ್ತದೆ. ಆದರೆ, ಇದನ್ನೇ ನೆಪವಾಗಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ ಎಂದು ಆಪಾದಿಸಿದರು.
ಸರ್ಕಾರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡುತ್ತಿದೆ. ಸಿದ್ಧರಾಮಯ್ಯನವರು ಹಿಂದೆ ಯಡಿಯೂರಪ್ಪನವರ ನೆರವು ಪಡೆದಿದ್ದರು ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು,ಯಾರಿಂದ ನೆರವು ಪಡೆದಿದ್ದರು ಎಂಬುದು ನನಗೆ ಗೊತ್ತಿಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಕ್ಕೆ ಇಷ್ಟಪಡುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


