ಪಾಕಿಸ್ತಾನಕ್ಕೆ ಚೀನಾ ಬೆಂಬಲ: ಪ್ರಧಾನಿ ಮೋದಿ ಆಕ್ಷೇಪ
ಮುಂಬೈ ದಾಳಿ ರೂವಾರಿ ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಬೆಂಬಲಕ್ಕೆ ನಿಂತಿರುವ ಚೀನಾ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಆಕ್ಷೇಪಿಸಿದ್ದು, ಇದು ತೀವ್ರ ಆಂತಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಮುಂಬೈ ದಾಳಿ ರೂವಾರಿ ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಬೆಂಬಲಕ್ಕೆ ನಿಂತಿರುವ ಚೀನಾ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಆಕ್ಷೇಪಿಸಿದ್ದು, ಇದು ತೀವ್ರ ಆಂತಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಅತ್ತ ವಿಶ್ವ ಸಂಸ್ಥೆಯಲ್ಲಿ ಭಾರತದ ಕ್ರಮಕ್ಕೆ ಚೀನಾ ತಡೆಯೊಡ್ಡುತ್ತಿದ್ದಂತೆಯೇ ಇತ್ತ ಚೀನಾ ಕ್ರಮವನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಅಲ್ಲದೆ ಲಖ್ವಿ ವಿರುದ್ಧ ಭಾರತ ಸೂಕ್ತ ಸಾಕ್ಷ್ಯಾಧಾರ ಒದಗಿಸಿಲ್ಲ ಎಂಬ ಹೇಳಿಕೆಯನ್ನು ಭಾರತ ಸರ್ಕಾರ ಅಲ್ಲ ಗಳೆದಿದ್ದು, ಚೀನಾ ಹೇಳಿಕೆಯನ್ನು ಖಂಡಿಸಿದೆ.
26/11 ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ಪಾತ್ರದ ಕುರಿತು ಭಾರತ ಸರ್ಕಾರ ಮೊದಲಿನಿಂದಲೂ ಪಾಕಿಸ್ತಾನಕ್ಕೆ ಸಾಕಷ್ಟು ಸಾಕ್ಷ್ಯಗಳನ್ನು ಮತ್ತು ದಾಖಲೆಗಳನ್ನು ನೀಡುತ್ತಾ ಬಂದಿತ್ತಾದರೂ ಪಾಕಿಸ್ತಾನ ಸರ್ಕಾರ ಮಾತ್ರ ಲಖ್ವಿ ವಿರುದ್ಧ ಸೂಕ್ತ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಮೊದಲಿನಿಂದಲೂ ಭಾರತ ಸರ್ಕಾರ ಸಾಕಷ್ಟು ಭಾರಿ ಪಾಕ್ ಸರ್ಕಾರದ ಮೇಲೆ ಒತ್ತಡ ಹೇರುತ್ತಾ ಬಂದಿದೆಯಾದರೂ ಪಾಕಿಸ್ತಾನ ಮತ್ತೆ ತನ್ನ ನಿರ್ಲಕ್ಷ್ಯತನವನ್ನು ಮುಂದುವರೆಸಿತ್ತು.
ಹೀಗಾಗಿ ಭಾರತ ಸರ್ಕಾರ ವಿಶ್ವಸಂಸ್ಥೆಯ ಮೊರೆ ಹೋಗಿತ್ತು. ಪಾಕಿಸ್ತಾನ ಲಖ್ವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಶ್ವಸಂಸ್ಥೆಯ ಮೂಲಕ ಒತ್ತಡ ಹೇರುವ ಪ್ರಯತ್ನಕ್ಕೆ ಚೀನಾ ತಡೆ ನೀಡಿದ್ದು, ಭಾರತ ಸರ್ಕಾರ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡಿಲ್ಲ ಎಂದು ಹೇಳಿದೆ. ಅಲ್ಲದೆ ಪಾಕಿಸ್ತಾನದ ಪರ ನಿಂತಿದೆ. ಚೀನಾ ಸರ್ಕಾರ ಈ ಇಬ್ಬಗೆ ನೀತಿ ಭಾರತ ಸರ್ಕಾರಕ್ಕೆ ಇರುಸು ಮುರುಸು ಉಂಟುಮಾಡಿದ್ದು, ಚೀನಾ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


