ಬಿಹಾರದ ಶಾಲೆಯಲ್ಲಿ 'ಬಿಸಿಯೂಟ' ಸೇವಿಸಿ ೫೦ ಮಕ್ಕಳು ಅಸ್ವಸ್ಥ
ಬಿಹಾರದ ಪಾಟ್ನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಕನಿಷ್ಠ ೫೦ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು
ಪಾಟ್ನಾ: ಬಿಹಾರದ ಪಾಟ್ನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಕನಿಷ್ಠ ೫೦ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಶಾಲಾ ಮಕ್ಕಳು ನೌಬತ್ಪುರ ಬ್ಲಾಕಿನ ತಂಗ್ರೈಲಾ ಗ್ರಾಮದ ಮಾಧ್ಯಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದಾಕ್ಷಣ ಕೆಲವರು ವಾಂತಿ ಮಾಡಿಕೊಂಡಿದ್ದಾರೆ ಹಾಗು ತಲೆ ಸುತ್ತಿ ಬಿದ್ದಿದ್ದಾರೆ" ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಟ್ನಾದಿಂದ ೨೫ ಕಿಮೀ ದೂರದಲ್ಲಿರುವ ನೌಬತ್ಪುರದ ರೆಫರಲ್ ಆಸ್ಪತ್ರಗೆ ಮಕ್ಕಳನ್ನು ದಾಖಲು ಮಾಡಲಾಗಿದೆ. "ಎಲ್ಲ ಮಕ್ಕಳನ್ನು ಗುರುವಾರ ರಾತ್ರಿ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುವುದು" ಎಂದು ಅಧಿಕಾರಿ ತಿಳಿಸಿದ್ದಾರೆ.
ತಪಾಸಣೆಗಾಗಿ ಊಟದ ತುಣುಕುಗಳನ್ನು ಸಂಗ್ರಹಿಸಲಾಗಿದೆ. ಮಕ್ಕಳನ್ನು ಪರಿಶೀಲಿಸಿದ ವೈದ್ಯರು ಅವರ ದೇಹದಲ್ಲಿ ಯಾವುದೇ ಹಾನಿಕಾರಕ ವಿಷಾಂಶ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಈ ವಾರದ ಮೊದಲ ಭಾಗದಲ್ಲಿ ಬಿಹಾರದ ಎರಡು ಶಾಲೆಗಳಲ್ಲಿ ಬಿಸಿಯೂಟ ಸೇವಿಸಿ ೭೨ ಮಕ್ಕಳು ಅಸ್ವಸ್ಥರಾಗಿದ್ದರು ಹಾಗೂ ಮತ್ತೊಂದು ಶಾಲೆಯ ಬಿಸಿಯೂಟದಲ್ಲಿ ಸತ್ತ ಹಲ್ಲಿ ಕಂಡುಬಂದಿತ್ತು.
೨೦೧೩ರಲ್ಲಿ ಸರನ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ೨೩ ವಿದ್ಯಾರ್ಥಿಗಳು ಮೃತಪಟ್ಟಿದ್ದರು.
ಬಿಹಾರದಾದ್ಯಂತ ೭೨ ಸಾವಿರ ಶಾಲೆಗಳಲ್ಲಿ ೧೬ ದಶಲಕ್ಷ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

