ಬಿಬಿಎಂಪಿ ಚುನಾವಣೆ ದಿನಾಂಕ ಪ್ರಕಟ: ಜುಲೈ 28ಕ್ಕೆ ಮತದಾನ, 31ಕ್ಕೆ ಫಲಿತಾಂಶ
ಕಡೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 28ರಂದು ಒಂದೇ....
ಬೆಂಗಳೂರು: ಕಡೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 28ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ.
ಇಂದು ಚುನಾವಣಾ ಆಯೋಗದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ಅವರು ಚುನಾವಣಾ ದಿನಾಂಕವನ್ನು ಪ್ರಕಟಿಸಿದರು.
ಬಿಬಿಎಂಪಿ ಚುನಾವಣೆಗೆ ಜುಲೈ 8ರಂದು ಅಧಿಸೂಚನೆ ಪ್ರಕಟಿಸಲಾಗುತ್ತಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಆಯುಕ್ತರು ತಿಳಿಸಿದರು.
ಜು.28ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ. ಜುಲೈ 31ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಜುಲೈ 15 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜು.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ವಾಪಸ್ ಪಡೆಯಲು ಜುಲೈ 20 ಕೊನೆಯ ದಿನವಾಗಿದೆ ಎಂದು ಶ್ರೀನಿವಾಸಾಚಾರಿ ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

