ಸಾಲಬಾಧೆ: ಹಾವೇರಿಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ
ರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಗುರುವಾರ ಮಂಡ್ಯದಲ್ಲಿ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ, ಅದರೊಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ...

ಹಾವೇರಿ: ರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಗುರುವಾರ ಮಂಡ್ಯದಲ್ಲಿ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ, ಅದರೊಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆಯ ಬೆನ್ನಲ್ಲೇ ಶುಕ್ರವಾರ ಮೈಸೂರಿನಲ್ಲಿ ಮತ್ತೊಬ್ಬ ರೈತ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದರು. ಸಾಲಬಾಧೆ ತಾಳದೇ ಶನಿವಾರ ಹಾವೇರಿಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ ತಾಲೂಕಿನ ಕೂರಗುಂದ ಗ್ರಾಮದ 32 ವರ್ಷದ ಜಗದೀಶ್ ಕಿಡೇಗಣ್ಣಿ ಸಾಲಬಾಧೆ ತಾಳದೇ ಇಂದು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ವಿವಿಧ ಬ್ಯಾಂಕ್‌ಗಳಲ್ಲಿ ಮೂರು ಲಕ್ಷಕ್ಕೂ ಅಧಿಕ ಮಾಡಿಕೊಂಡಿದ್ದ ಎನ್ನಲಾಗಿದೆ.
ಇನ್ನು ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರ ಕಷ್ಟಗಳಿಗೆ ಆತ್ಮಹತ್ಯೆಯೊಂದೇ ಪರಿಹಾರ ಅಲ್ಲ. ರೈತರಿಗೆ ಏನೇ ಸಮಸ್ಯೆ ಇದ್ದರೂ ಸರ್ಕಾರ ಬಗೆಹರಿಸುತ್ತದೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಸಿಎಂ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


