ತನ್ನದೇ ಜಮೀನನಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈತ
ರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದೆ. ಭಾನುವಾರ ಮಂಡ್ಯದ ಹೊನ್ನಾಯಕನಹಳ್ಳಿಯ ರೈತನೊಬ್ಬ ತನ್ನದೇ ಜಮೀನಿನಲ್ಲಿದ್ದ ಬಾವಿಗೆ ಹಾರಿ...

ಮಂಡ್ಯ: ರಾಜ್ಯದಲ್ಲಿ ರೈತ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದೆ. ಭಾನುವಾರ ಮಂಡ್ಯದ ಹೊನ್ನಾಯಕನಹಳ್ಳಿಯ ರೈತನೊಬ್ಬ ತನ್ನದೇ ಜಮೀನಿನಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಇತ್ತೀಚೆಗಷ್ಟೇ ಮಂಡ್ಯದಲ್ಲಿ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ, ಅದರೊಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಾಸುವ ಬೆನ್ನಲ್ಲೇ ಹೊನ್ನಾಯಕನಹಳ್ಳಿ 37 ವರ್ಷದ ರೈತ ಶಿವಲಿಂಗೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಬ್ಬು ಬೆಳೆಯಲು ಬ್ಯಾಂಕ್ ನಿಂದ ಸಾಲ ಪಡೆದಿದ್ದ ಶಿವಲಿಂಗೇಗೌಡ ಸಾಲ ಮರುಪಾವತಿ ಮಾಡದಿದ್ದರಿಂದ ಎಸ್ ಬಿಐ ಬ್ಯಾಂಕಿನವರು ಮನೆ ಜಪ್ತಿ ಮಾಡುವ ಎಚ್ಚರಿಕೆ ನೀಡಿದ್ದರು. ಇದಕ್ಕೆ ಎದರಿದ ಶಿವಲಿಂಗೇಗೌಡ ಅವರು ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


