ಪ್ರಧಾನ ಸುದ್ದಿ

ಬಿಬಿಎಂಪಿ ಚುನಾವಣೆ ಪ್ರಶ್ನಿಸಿ ಸುಪ್ರೀಂಗೆ?

ಬಿಬಿಎಂಪಿ ಚುನಾವಣೆಗೆ ಮುಹೂರ್ತ ಅಂತಿಮ ಗೊಂಡಿದೆ. ಆದರೆ, ಕೊನೆ ಗಳಿಗೆಯಲ್ಲಿ ರಾಜ್ಯ ಸರ್ಕಾರ ಚುನಾವಣೆ ಮುಂದೂಡುವ ಪ್ರಯತ್ನಕ್ಕೆ ಕೈ ಹಾಕಿದ್ದು ಚುನಾವಣೆ ಮೇಲೆ ಮತ್ತೆ ಅನಿಶ್ಚಿತತೆಯ ಕಾರ್ಮೋಡ ಕವಿದಿದೆ...

ಬಿಬಿಎಂಪಿ ಚುನಾವಣೆ ಪ್ರಶ್ನಿಸಿ ಸುಪ್ರೀಂಗೆ?
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಅಂತಿಮ ಗೊಂಡಿದೆ. ಆದರೆ, ಕೊನೆ ಗಳಿಗೆಯಲ್ಲಿ ರಾಜ್ಯ ಸರ್ಕಾರ ಚುನಾವಣೆ ಮುಂದೂಡುವ ಪ್ರಯತ್ನಕ್ಕೆ ಕೈ ಹಾಕಿದ್ದು ಚುನಾವಣೆ ಮೇಲೆ ಮತ್ತೆ ಅನಿಶ್ಚಿತತೆಯ ಕಾರ್ಮೋಡ ಕವಿದಿದೆ.

ಚುನಾವಣೆ ದಿನಾಂಕ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ, `ನಾವು ಸಿದ್ಧರಾಗಿದ್ದೇವೆ, ಮೇಲ್ಮನವಿ ಸಲ್ಲಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ' ಎಂದು ಬೆಂಗಳೂರು ಉಸ್ತುವಾರಿ ಸಚಿವ ರಾಮ ಲಿಂಗಾರೆಡ್ಡಿ ಅವರು ಶನಿವಾರ ಹೇಳಿಕೆ ನೀಡಿದ ಮಾರನೇ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅದಕ್ಕೆ ಭಿನ್ನವಾದ ಹೇಳಿಕೆ ನೀಡಿ ಸ್ಪರ್ಧಾಕಾಂಕ್ಷಿಗಳಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆ.

ಸಿಎಂ ಭಿನ್ನರಾಗ: ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರಿಂ ಕೋರ್ಟಿಗೆ ಹೋಗುವ ಚಿಂತನೆ ಇದೆ ಎಂದು ಹೇಳಿದ್ದಾರೆ.

ಜುಲೈ 28ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‍ಗಳಿಗೆ ಮತದಾನ ಎಂದು ಚುನಾವಣಾ ಆಯೋಗ ಘೋಷಿಸಿದೆ. ಚುನಾವಣೆಗೆ ಜುಲೈ 8ರಂದು ಅಧಿಸೂಚನೆ ಪ್ರಕಟಿಸಲಾಗುತ್ತಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದೀಗ ಅಧಿಸೂಚನೆ ಹೊರಡಿಸಲು ಇರುವ ಅವಧಿಯೊಳಗೆ ಸುಪ್ರಿಂ ಕೋರ್ಟ್ ಮೆಟ್ಟಿಲೇರಿ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ತರುವ ನಿಟ್ಟಿನಲ್ಲಿ ಸರ್ಕಾರ ತಯಾರಿ ನಡೆಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಜ್ಞರ ಜತೆ ಚರ್ಚೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಸರ್ಕಾರ ಸುಪ್ರಿಂ ಮೆಟ್ಟಿಲೇರುವುದು ನಿಶ್ಚಿತ ಎಂದು ಉನ್ನತ ಮೂಲಗಳು ತಿಳಿಸಿವೆ.

ಏಕೆ ಈ ನಿರ್ಧಾರ?
2001ರ ಜನಗಣತಿಯಂತೆ 198 ವಾರ್ಡುಗಳಿವೆ. ಅನೇಕ ವಾರ್ಡುಗಳಲ್ಲಿ ಜನಸಂಖ್ಯೆಯಲ್ಲಿ ವ್ಯತ್ಯಾಸವಿದೆ. ಅಲ್ಲದೇ, 2011ರ ಜನಗಣತಿ ವರದಿ ಹೊರಬಂದಿದ್ದು, ಇದನ್ನಾಧರಿಸಿ ವಾರ್ಡುಗಳು ಮತ್ತು ಮೀಸಲಾತಿ ಸಿದ್ಧವಾಗಬೇಕು. ಹೀಗಾದರೆ ಮಾತ್ರ ಹಿಂದುಳಿದ ಸಮಾಜಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ. ಹೀಗಾಗಿಯೇ ವಾರ್ಡು ಮರು ವಿಂಗಡಣೆಯಾಗಬೇಕಾಗಿದ್ದು, ಅಲ್ಲಿಯವರೆಗೆ ಸಮಯಾವಕಾಶ ಬೇಕಾಗುತ್ತದೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡುವ ವಿವರಣೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.