ಇಂಡೋನೇಷ್ಯಾ: ಜನವಸತಿ ಪ್ರದೇಶದಲ್ಲಿ ವಿಮಾನ ಪತನ; 30 ಮಂದಿ ಸಾವು
ತಾಂತ್ರಿಕ ಸಮಸ್ಯೆಯಿಂದ ಮಿಲಿಟರಿ ವಿಮಾನವೊಂದು ಪತನಗೊಂಡ ಪರಿಣಾಮ 30 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾದ ಸುಮಾತ್ರ...

ಜಕಾರ್ತ: ತಾಂತ್ರಿಕ ಸಮಸ್ಯೆಯಿಂದ ಮಿಲಿಟರಿ ವಿಮಾನವೊಂದು ಪತನಗೊಂಡ ಪರಿಣಾಮ 30 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾದ ಸುಮಾತ್ರ ದ್ವೀಪದ ಸಮೀಪ ಜನವಸತಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಇದೊಂದು ಸರಕು ಸಾಗಣೆ ವಿಮಾನವಾಗಿದ್ದು, ಇದರಲ್ಲಿ ಪ್ರಯಾಣಿಸುತ್ತಿದ್ದ 12 ಸಿಬ್ಬಂದಿ ಸೇರಿದಂತೆ 18 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆಎಂದು ಇಂಡೋನೇಷ್ಯಾದ ವಾಯುಪಡೆಯ ಮುಖ್ಯಸ್ಥ ಆಗಸ್ ಸುಪ್ರಿಂತಾ ಖಾಸಗಿ ತಿಳಿಸಿದ್ದಾರೆ.
ವಿಮಾನ ಪತನಗೊಳ್ಳುವ ಕೆಲವೇ ಕ್ಷಣಗಳ ಮುಂಚೆ ಪೈಲಟ್, ನಿಲ್ದಾಣದಲ್ಲಿನ ನಿಯಂತ್ರಣ ಕೊಠಡಿಗೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎನ್ನುವ ತುರ್ತು ಸಂದೇಶ ಕಳುಹಿಸಿದ್ದರು. ಸಾವಿನ ಸಂಖ್ಯೆ ಇನ್ನೂ ನಿಖರಾವಿಗ ತಿಳಿದುಬಂದಿಲ್ಲ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


