ಪ್ರಧಾನ ಸುದ್ದಿ

ಚುನಾವಣೆ ಮುಂದೂಡಿ: ಮತ್ತೆ ಸುಪ್ರೀಂಗೆ ಮೊರೆ

ಬಿಬಿಎಂಪಿ ಚುನಾವಣೆಯನ್ನು ಹೇಗಾದರೂ ಸರಿ ಮುಂದೂಡಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಕರ್ನಾಟಕ ಸರ್ಕಾರ ಮತ್ತೆ ಸುಪ್ರೀಂಕೋಟ್ರ್ ಮೊರೆ ಹೋಗಿದೆ. ಪ್ರಸ್ತುತ 2001ರ ಜನಗಣತಿ ಪ್ರಕಾರ ಮೀಸಲು ನಿಗದಿ ಮಾಡಲಾಗಿದೆ...

ಚುನಾವಣೆ ಮುಂದೂಡಿ: ಮತ್ತೆ ಸುಪ್ರೀಂಗೆ ಮೊರೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ನವದೆಹಲಿ: ಬಿಬಿಎಂಪಿ ಚುನಾವಣೆಯನ್ನು ಹೇಗಾದರೂ ಸರಿ ಮುಂದೂಡಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಕರ್ನಾಟಕ ಸರ್ಕಾರ ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಪ್ರಸ್ತುತ 2001ರ ಜನಗಣತಿ ಪ್ರಕಾರ ಮೀಸಲು ನಿಗದಿ ಮಾಡಲಾಗಿದೆ. 2011ರ ಜನಗಣತಿಯಂತೆ ಮೀಸಲು ನಿಗದಿ ಮಾಡಿ ಚುನಾವಣೆ ನಡೆಸಲು ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಸೋಮವಾರ ಸಲ್ಲಿಸಿದ ಮೇಲ್ಮನವಿಯಲ್ಲಿ ಕೋರಿದೆ. ಜತೆಗೆ ಚುನಾವಣೆ ಮುಂದೂಡಲು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ ಮಾಡಿ ರಾಜ್ಯ ಸರ್ಕಾರಕ್ಕೆ <10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ನ ಏಕ ಸದಸ್ಯ ಪೀಠದ ಆದೇಶವನ್ನು ಮೇಲ್ಮನವಿಯಲ್ಲಿ ಪ್ರಶ್ನಿಸಿದೆ.

ಮೇ 5 ರಂದು ಸ್ವತಃ ಸುಪ್ರೀಂಕೋರ್ಟ್ ಮೂರು ತಿಂಗಳ ಒಳಗಾಗಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಆ ಆದೇಶದಂತೆ ರಾಜ್ಯ ಸರ್ಕಾರ ಈಗ 2001ರ ಜನಗಣತಿ ಆಧಾರದ ಮೇಲೆ ಚುನಾವಣೆ ನಡೆಸುತ್ತಿದೆ. 2011ನೇ ಸಾಲಿನ ಜನಗಣತಿ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡದೇ ಇದ್ದರೆ ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಪ್ರಾತಿನಿಧ್ಯ ಕಡಮೆಯಾಗಲಿದ್ದು, ಆ ಸಮುದಾಯಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ದಕ್ಕುವುದಿಲ್ಲ.

ಆದ್ದರಿಂದ, 2001ರ ಸಾಲಿನ ಜನಗಣತಿ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡಿರುವುದರಿಂದ ಅದನ್ನು ಕೈಬಿಟ್ಟು, 2011ರ ಜನಗಣತಿ ಆಧಾರದ ಮೇಲೆ ಚುನಾವಣೆ ನಡೆಸಲು ಕಾಲಾವಕಾಶ ನೀಡಬೇಕು ಎಂದು ಮೇಲ್ಮನವಿಯಲ್ಲಿ ವಿವರಿಸಲಾಗಿದೆ. ಇನ್ನೆರಡು ದಿನ ಸುಪ್ರೀಂಕೋರ್ಟ್‍ ಗೆ ರಜೆ. ಜುಲೈ 2 ರಿಂದ ಸುಪ್ರೀಂಕೋರ್ಟ್ ಕಲಾಪಗಳು ಆರಂಭವಾಗಲಿದ್ದು, ಅರ್ಜಿ ವಿಚಾರಣೆಗೆ ಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.