ಪ್ರಧಾನ ಸುದ್ದಿ

ರಾಜ್ಯದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ, ವರದಿ ಕೇಳಿದ ರಾಹುಲ್ ಗಾಂಧಿ

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಈ ಬಗ್ಗೆ ವರದಿ ನೀಡುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ...

ರಾಜ್ಯದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ, ವರದಿ ಕೇಳಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ,
Published On :

ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಈ ಬಗ್ಗೆ ವರದಿ ನೀಡುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.

ಯಾವ ಕಾರಣಕ್ಕಾಗಿ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ಇದನ್ನು ತಡೆಯಲು ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿರುವ ರಾಹುಲ್ ಗಾಂಧಿ, ಈ ಕುರಿತು ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇಂದು ಮತ್ತೊಬ್ಬ ರೈತ ಆತ್ಮಹತ್ಯೆ
ಸಾಲಬಾಧೆ ತಾಳಲಾರದೆ ಬುಧವಾರ ಮಂಡ್ಯ ಜಿಲ್ಲೆಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆ.ಆರ್.ಪೇಟೆ ತಾಲೂಕಿನ ಹಿರಿಕಳಲೆ ಗ್ರಾಮದ ಶಂಕರೇಗೌಡ(40) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂರು ಎಕರೆ ಜಮೀನು ಹೊಂದಿರುವ ಶಂಕರೇಗೌಡ ಮೂರರಿಂದ ನಾಲ್ಕು ಲಕ್ಷ ರುಪಾಯಿ ಕೈಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.