ಪ್ರಧಾನ ಸುದ್ದಿ

ಎಎಪಿ ರಾಷ್ಟೀಯ ಕಾರ್ಯಕಾರಿಣಿ ಸಭೆ ಇಂದು: ಕೇಜ್ರಿವಾಲ್ ಗೈರು?

ನವದೆಹಲಿಯಲ್ಲಿ ಬುಧವಾರ ನಡೆಯಲಿರುವ ರಾಷ್ಟೀಯ ಕಾರ್ಯಕಾರಿಣಿ ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳುವ

ಎಎಪಿ ರಾಷ್ಟೀಯ ಕಾರ್ಯಕಾರಿಣಿ ಸಭೆ ಇಂದು: ಕೇಜ್ರಿವಾಲ್ ಗೈರು?
ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ನವದೆಹಲಿಯಲ್ಲಿ ಬುಧವಾರ ನಡೆಯಲಿರುವ ಎಎಪಿ ರಾಷ್ಟೀಯ ಕಾರ್ಯಕಾರಿಣಿ ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈ ಸಭೆಯಲ್ಲಿ ಪಕ್ಷದ ಮುಖಂಡರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರ ಭವಿಷ್ಯ ನಿರ್ಧಾರವಾಗಲಿದೆ ಎನ್ನುತ್ತವೆ ಮೂಲಗಳು.

ಮಂಗಳವಾರ ಯೋಗೇಂದ್ರ ಯಾದವ್ ಅವರು ಕಾರ್ಯಕಾರಿಣಿ ಸಭೆಯಲ್ಲಿ ಭಿನಾಭಿಪ್ರಾಯಗಳು ಬಗೆಹರಿಯುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಕೇಜ್ರಿವಾಲ್ ಕೂಡ ಮಂಗಳವಾರ ಪಕ್ಷದ ಬೆಳವಣಿಗೆಗಳಿಂದ ತೀವ್ರ ನೋವಾಗಿದೆ. ದೆಹಲಿ ಜನರು ನಮ್ಮ ಮೇಲಿಟ್ಟಿದ್ದ ಭರವಸೆಗೆ ಇದು ದ್ರೋಹ ಇದು. ಆದರೂ ನಾನು ಈ ಜಗಳಗಳಲ್ಲಿ ಭಾಗಿಯಾಗದೆ, ಆಡಳಿತದ ಬಗ್ಗೆ ಗಮನ ಹರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

ಅರವಿಂದ್ ಕೇಜ್ರಿವಾಲ್ ಅವರನ್ನು ಆಪ್ ಪಕ್ಷದ ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಕಿತ್ತು ಹಾಕಲು ಯೋಗೆಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಪಿತೂರಿ ನಡೆಸಿದ್ದಾರೆ ಎಂದು ಪಕ್ಷದ ಮುಖಂಡ ಸಂಜಯ್ ಸಿಂಗ್ ದೂರಿದ್ದರು. ಬಿಗಡಾಯಿಸುತ್ತಿರುವ ತಮ್ಮ ಆರೋಗ್ಯದ ಚಿಕಿತ್ಸೆಗೆ ಮಾರ್ಚ್ ೫ ರಂದು ಬೆಂಗಳೂರಿನ ನ್ಯಾಚುರೋಪತಿ ಕೇಂದ್ರಕ್ಕೆ ಕೇಜ್ರಿವಾಲ್ ತೆರಳಲಿದ್ದಾರೆ ಎಂದು ಕೂಡ ತಿಳಿದುಬಂದಿದೆ.

ಕೇಜ್ರಿವಾಲ್ ಅವರ ಗೈರಿನಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಧಿಯ ಉನ್ನತ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ.

ಕೇಜ್ರಿವಾಲ್ ಅವರ ಏಕಾಧಿಪತ್ಯದ ಆಡಳಿತದ ಬಗ್ಗೆ ಯೋಗೇಂದ್ರ ಮತ್ತು ಪ್ರಶಾಂತ್ ಪ್ರಶ್ನಿಸಿದ್ದರು. ರಾಜಕೀಯ ವ್ಯವಹಾರಗಳ ಸಮಿತಿಯಿಂದ ಹೊರಗೆ ಹೋಗುವುದಾಗಿ ಕೂಡ ಈ ಇಬ್ಬರೂ ನಾಯಕರು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.