ಪ್ರಧಾನ ಸುದ್ದಿ

ಪಾಕಿಸ್ತಾನ ಮೂಲದ ಭಯೋತ್ಪಾದನ ಸಂಘಟನೆಗಳ ಮುಖ್ಯ ಗುರಿ ಭಾರತವೇ: ಸರ್ಕಾರ

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಗೆ, ಅದರಲ್ಲೂ ಲಷ್ಕರ್ ಎ ತೈಬಾ ಮತ್ತು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗಳಿದೆ ಇನ್ನು ಭಾರತವೇ

ಪಾಕಿಸ್ತಾನ ಮೂಲದ ಭಯೋತ್ಪಾದನ ಸಂಘಟನೆಗಳ ಮುಖ್ಯ ಗುರಿ ಭಾರತವೇ: ಸರ್ಕಾರ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಗೆ, ಅದರಲ್ಲೂ ಲಷ್ಕರ್ ಎ ತೈಬಾ ಮತ್ತು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗಳಿದೆ ಇನ್ನು ಭಾರತವೇ ಗುರಿ ಎಂದು ಲೋಕಸಭೆಯಲ್ಲಿ ಸರ್ಕಾರ ತಿಳಿಸಿದೆ. ಗೃಹ ಸಚಿವಾಲಯದ ರಾಜ್ಯ ಸಚಿವ ಹರಿಭಾಯ್ ಪ್ರತಿಭಾಯ್ ಚೌಧರಿ ಅವರು, ಪಾಕಿಸ್ತಾನದ ಐ ಎಸ್ ಐ ಅಲ್ಲಿನ ಭಯೋತ್ಪಾದಕರಿಗೆ ವಸತಿ, ತರಬೇತಿ ಮತ್ತು ಹಣಕಾಸಿನ ನೆರವು ನೀಡುತ್ತಿದೆ ಎಂದು ಸೆರೆ ಸಿಕ್ಕಿರುವ ಭಯೋತ್ಪಾದಕರು ಭದ್ರತಾ ಪಡೆಗಳಿಗೆ ತಿಳಿಸಿದ್ದಾರೆ ಎಂದು ಲೋಕಸಭೆಯಲ್ಲಿ ತಿಳಿಸಿದ್ದಾರೆ.

"ಇಂಡೊ -ನೇಪಾಳ ಗಡಿ ಮತ್ತು ಇಂಡೋ-ಪಾಕ್ ಗಡಿ ಬಳಸಿ ಭಯೋತ್ಪಾದಕರು ಶಸ್ತ್ರಾಸ್ತಗಳು, ಸ್ಫೋಟಕಗಳನ್ನು ಭಾರತದ ವಿರುದ್ಧ  ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಸಾಗಿಸುತ್ತಿದ್ದಾರೆ" ಎಂದು ಲಿಖಿತ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ. ಐ ಎಸ್ ಐ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವುದರ ಬಗ್ಗೆ ಸಾಕ್ಷ್ಯಗಳನ್ನು ಸಂಪಾದನೆ ಮಾಡಿ ಪಾಕಿಸ್ತಾನ ಅಧಿಕಾರಿಗಳಿಗೆ ನೀಡಿದ್ದೇವೆ ಎಂದಿದ್ದಾರೆ. ಇದೇ ವೇಳೆಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕಾ ಸಂಘಟನೆಗಳ ಚಟಿವಟಿಕೆಗಳನ್ನು ತಡೆಯಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.