ಕಲ್ಲಿದ್ದಲು ಹಗರಣ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಸಮನ್ಸ್
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ 6 ಆರೋಪಿಗಳಿಗೆ ಬುಧವಾರ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ 6 ಆರೋಪಿಗಳಿಗೆ ಬುಧವಾರ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್‌ನ ನ್ಯಾಯಾಧೀಶ ಭರತ್ ಪರಾಶರ್ ಅವರು, ಉದ್ಯಮಿ, ಕುಮಾರ್ ಮಂಗಲಂ ಬಿರ್ಲಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿ.ಸಿ.ಪರಾಖ್ ಮತ್ತು ಇತರೆ ಮೂವರು ಆರೋಪಿಗಳಿಗೆ ಏಪ್ರಿಲ್ 8ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಇದೇ ಪ್ರಕರಣ ಸಂಬಂಧ ಈ ಹಿಂದೆ ಸಿಬಿಐ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಬಿರ್ಲಾ ಅವರು 2005ರ ಮೇ 7ರಂದು ಮತ್ತು ಜೂನ್ 17ರಂದು ಎರಡು ಪತ್ರಗಳನ್ನು ಬರೆದ ಹಿನ್ನೆಲೆಯಲ್ಲಿ ಕಲ್ಲಿದ್ದಲು ಸಚಿವಾಲಯ ಮತ್ತು ಪ್ರಧಾನಿ ಕಾರ್ಯಾಲಯದ ವಿದ್ಯಾಮಾನಗಳ ಕುರಿತು ಸಿಬಿಐ ಮನಮೋಹನ್ ಸಿಂಗ್ ಅವರನ್ನು ಪ್ರಶ್ನಿಸಿತ್ತು.
2004ರಿಂದ 2009ರ ವರೆಗಿನ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಸೇರಿದಂತೆ ಒಟ್ಟು 6 ಮಂದಿಯ ವಿರುದ್ಧ, ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿತ್ತು.
ಇನ್ನು ಕೋರ್ಟ್ ಸಮನ್ಸ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ, ಸಮನ್ಸ್‌ನಿಂದ ನನಗೆ ನೋವಾಗಿದೆ. ಆದರೆ ಪ್ರಕರಣದ ತನಿಖಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


