ಪ್ರಧಾನ ಸುದ್ದಿ

ಟೋಲ್ ಸಮಸ್ಯೆ ಬಗ್ಗೆ ಮಹಾ ಸಿಎಂಗೆ ಸಚಿನ್ ಪತ್ರ

ಮಹಾರಾಷ್ಟ್ರದಲ್ಲಿ ಟೋಲ್ ತೆರಿಗೆಯಿಂದ ರಾಜ್ಯದ ಜನರು ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ...

ಟೋಲ್ ಸಮಸ್ಯೆ ಬಗ್ಗೆ ಮಹಾ ಸಿಎಂಗೆ ಸಚಿನ್ ಪತ್ರ
ಸಚಿನ್ ತೆಂಡೂಲ್ಕರ್
Published On :

ಮುಂಬೈ: ಮಹಾರಾಷ್ಟ್ರದಲ್ಲಿ ಟೋಲ್ ತೆರಿಗೆಯಿಂದ ರಾಜ್ಯದ ಜನರು ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರಿದಿದ್ದಾರೆ.

ಮಹಾರಾಷ್ಟ್ರದಲ್ಲಿನ ಟೋಲ್ ಗೇಟ್‌ಗಳ ನಿರ್ವಹಣೆಯ ಬಗ್ಗೆ ಸಚಿನ್ ಮಹಾ ಸರ್ಕಾರದ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಮುಂಬೈಯಿಂದ ಹೋಗುವ ಮತ್ತು ಬರುವ ಪ್ರಯಾಣಿಕರು ಟೋಲ್ ಗೇಟ್‌ನಿಂದ ಮಾನಸಿಕ ಮತ್ತು ಶಾರೀರಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಟೋಲ್ ಗೇಟ್ ನಿರ್ವಹಣೆಯ ಬಗ್ಗೆ ಮರುಚಿಂತನೆ ನಡೆಸಿ ಸುಧಾರಣೆ ಕೈಗೊಳ್ಳುವುದೊಳಿತು ಎಂದು ಸಚಿನ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಟೋಲ್ ಗೇಟ್‌ಗಳಿಂದಾಗಿ ಪ್ರಯಾಣಿಕರು ಸಂಕಷ್ಟ ಅನುಭವಿಸಬಾರದು ಎಂದು ಸಚಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಏತನ್ಮಧ್ಯೆ, ಸಚಿನ್ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಚಂದ್ರಕಾಂತ್ ಪಾಟೀಲ್, ಪ್ರಯಾಣಿಕರ ಕಷ್ಟಗಳಿಗೆ ಶೀಘ್ರದಲ್ಲೇ ಪರಿಹಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.