ಪ್ರಧಾನ ಸುದ್ದಿ

ಡಿ.ಕೆ ರವಿ ಸಾವು: ಪ್ರತಿಪಕ್ಷಗಳ ಧರಣಿ ಹಿನ್ನೆಲೆಯಲ್ಲಿ ಕಲಾಪ ಮುಂದೂಡಿಕೆ

ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ.ರವಿ ಅವರ ಸಾವಿನ ನಿಗೂಢತೆಯನ್ನು ಖಂಡಿಸಿ ಹಾಗೂ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿವಂತೆ ಆಗ್ರಹಿಸಿ ವಿಪಕ್ಷಗಳು...

ಡಿ.ಕೆ ರವಿ ಸಾವು: ಪ್ರತಿಪಕ್ಷಗಳ ಧರಣಿ ಹಿನ್ನೆಲೆಯಲ್ಲಿ ಕಲಾಪ ಮುಂದೂಡಿಕೆ
ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಧರಣಿ
Published On :

ಬೆಂಗಳೂರು: ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ.ರವಿ ಅವರ ಸಾವಿನ ನಿಗೂಢತೆಯನ್ನು  ಖಂಡಿಸಿ ಹಾಗೂ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ವಿಪಕ್ಷಗಳು ಧರಣಿಯನ್ನು ಮುಂದುವರೆಸಿದ ಹಿನ್ನಲೆಯಲ್ಲಿ ಇಂದು ಆರಂಭಗೊಂಡ ಕಲಾಪವನ್ನು ಸ್ಪೀಕರ್ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದಾರೆ.

ಡಿ.ಕೆ.ರವಿ ಅವರ ನಿಗೂಢ ಸಾವಿನ ವಿಚಾರ ಇಂದು ಕೂಡ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿರುವ ವಿಪಕ್ಷಗಳು ರವಿ ಅವರ ಭಾವಚಿತ್ರವನ್ನು ಹಿಡಿದು, ಕೈಗೆ ಕಪ್ಪು ಪಟ್ಟಿ ಧರಿಸಿ ಸದನದ ಬಾವಿಗಿಳಿದು ಧರಣಿಯನ್ನು ಮುಂದುವರೆಸಿತು.

ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎಂಬುದು  ಮತ್ತೊಮ್ಮೆ ಸಾಬೀತಾಗಿದೆ. ಸರ್ಕಾರ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಸಿದೆ.  ನಿನ್ನೆ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ರವಿ ಸಾವು ಆತ್ಮಹತ್ಯೆ ಎಂದು ದೃಢೀಕರಣ ನೀಡಿದ್ದಾರೆ.

ಹೀಗಾಗಿಯೇ ರಾಜ್ಯ ಸರ್ಕಾರಿದಂದ ಈ ಪ್ರಕರಣಕ್ಕೆ  ನ್ಯಾಯ ಸಿಗುವುದು ಸಾದ್ಯವಿಲ್ಲ. ಸಿಬಿಐ ತನಿಖೆಗೆ ಒಪ್ಪಿಸಿ ಎಂದು  ಪ್ರತಿಪಕ್ಷಗಳು ಆಗ್ರಹಿಸಿದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.