ಡಿಕೆ ರವಿ ಪ್ರಕರಣ ಸಿಬಿಐಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ: ಸಂಪುಟ ಸಭೆ ಬಳಿಕ ಜಾರ್ಜ್
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಗುರುವಾರ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ. ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದರು. ಅಲ್ಲದೆ ವಿಧಾನಸಭೆಯಲ್ಲಿ ಸರ್ಕಾರದ ಹೇಳಿದ ನಿಲುವಿಗೆ ಸಚಿವ ಸಂಪುಟ ಬದ್ಧವಾಗಿದೆ ಎಂದು ಹೇಳಿದರು.
ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂಬ ಕೂಗು ಬಲವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದಿಢೀರ್ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಕುರಿತು ಚರ್ಚಿಸಲಾಯಿತು.
ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗಗಳಾಗಿ ವಿಭಜಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


