ಹೈಕೋರ್ಟ್ ಮೆಟ್ಟಿಲೇರಿದ ರವಿ ಸಾವಿನ ಪ್ರಕರಣ
ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ತುಮಕೂರು ಜಿಲ್ಲೆ ನಿವಾಸಿಯೊಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ತುಮಕೂರು ಜಿಲ್ಲೆ ನಿವಾಸಿಯೊಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ರಿಜಿಸ್ಟಾರ್ ಜನರಲ್ ಗೆ ಅವರಿಗೆ ಪ್ರಕರಣ ಸಿಬಿಐಗೆ ವಹಿಸುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದ ನಿವಾಸಿ ಜಿ.ಮಧುಸೂಧನ್, ಕಾನೂನು ಪದವಿ ವಕೀಲರ ಸಂಘದ ಅಧ್ಯಕ್ಷ ಎಸ್.ಉಮೇಶ್, ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರು ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಮನವಿ ಪತ್ರ ಸಲ್ಲಿಸಿದರು.
ಕೋರ್ಟ್ ನ ಹೊರಗೂ ಪ್ರಕರಣ ಭಾರಿ ಸದ್ದು ಮಾಡಿದೆ. ಬೆಂಗಳೂರು ವಕೀಲರ ಸಂಘ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿತು.
ಡಿ.ಕೆ ರವಿ ಸಾವು ಖಂಡಿಸಿ ಮಧ್ಯಾಹ್ನ 1.30ಕ್ಕೆ ವಕೀಲರ ಸಂಘ ಹೈಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿತು. ರವಿ ಅವರು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ, ಅವರ ಸಾವು ರಾಜ್ಯಕ್ಕೆ ತುಂಬಲಾರದ ನಷ್ಟ, ಇದೊಂದು ಅಸಹಜ ಸಾವು, ಸತ್ಯ ಹೊರಬರಬೇಕಾದರೆ ಸರ್ಕಾರ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕು ಸಂಘದ ಅಧ್ಯಕ್ಷ ಎಚ್.ಸಿ ಶಿವರಾಮು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಪುಟ್ಟೇಗೌಡ ಹಾಗೂ ನೂರಾರು ವಕೀಲರು ಭಾಗವಹಿಸಿ, ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು. ನಂತರ ಎರಡು ನಿಮಿಷ ಮೌನ ಆಚರಿಸಿ, ರವಿ ಅವರ ಆತ್ಮಕ್ಕೆ ಶಾಂತಿ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


