ರವಿ ನಿಗೂಢ ಸಾವಿನ ಪ್ರಕರಣ ಸಿಬಿಐಗೆ ವಹಿಸಲು ಸಿಎಂ ನಿರ್ಧಾರ?
ಪ್ರತಿಪಕ್ಷಗಳ ಹಾಗೂ ಸಾರ್ವಜನಿಕರ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದಾರಾಮಯ್ಯ ನಿರ್ಧರಿಸಿದ್ದಾರೆ...

ಬೆಂಗಳೂರು: ಪ್ರತಿಪಕ್ಷಗಳ ಹಾಗೂ ಸಾರ್ವಜನಿಕರ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದಾರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಸೋಮವಾರ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಬಳಿಕ ಸದನದಲ್ಲೇ ಸಿಎಂ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಬಿಐ ವಹಿಸುವ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
ರವಿ ಅವರ ನಿಗೂಢ ಸಾವಿನ ಪ್ರಕರಣ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿರುವುದರಿಂದ ಮತ್ತು ರಾಜ್ಯಾದ್ಯಾಂತ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವತಃ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸೂಚಿಸಿದ್ದಾರೆ ಮತ್ತು ಇದಕ್ಕೆ ಸಿಎಂ ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಪ್ರಕರಣ ಮುಂದೆ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇದ್ದು, ಒಂದು ವೇಳೆ ಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸೂಚಿಸಿದರೆ ಆಗ ಅನಿವಾರ್ಯವಾಗಿ ಸಿಬಿಐಗೆ ವಹಿಸಬೇಕಾಗುತ್ತದೆ. ಹೀಗಾಗಿ ಸೋಮವಾರದ ವೇಳೆಗೆ ರವಿ ನಿಗೂಢ ಸಾವಿನ ಕುರಿತ ಎಲ್ಲಾ ಅಂಶಗಳನ್ನು ಸಿಐಡಿ ತನಿಖೆಯ ಮೂಲಕ ಅರಿತುಕೊಳ್ಳುವುದು. ಅನಂತರ ಆ ಎಲ್ಲಾ ಅಂಶಗಳನ್ನು ಜನರ ಮುಂದಿಡಲು ಸರ್ಕಾರ ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


