ಡಿಕೆ ರವಿ ಪ್ರಕರಣ: ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ಹೈಕೋರ್ಟ್ ನಿರ್ಬಂಧ
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಭಾನುವಾರ ನಿರ್ಬಂಧ ಹೇರಿದೆ.

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಭಾನುವಾರ ನಿರ್ಬಂಧ ಹೇರಿದೆ.
ಇಂದು ಭಾನುವಾರವಾಗಿದ್ದರಿಂದ ತಮ್ಮ ನಿವಾಸದಲ್ಲೇ ರಿಟ್ ಅರ್ಜಿಯ ವಿಚಾರಣೆ ನಡೆಸಿದ, ನ್ಯಾಮೂರ್ತಿ ಎಸ್. ಅಬ್ದುಲ್ ನಜೀರ್ ಅವರು, ವರದಿ ಬಹಿರಂಗಕ್ಕೆ ನಿರ್ಬಂಧ ಹೇರಿದ್ದಾರೆ.
ತನಿಖೆ ಪೂರ್ಣಗೊಳಿಸದೇ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಸಿಐಡಿ ಅಧಿಕಾರಿಗಳಿಗೆ ಸೂಚಿಸಿರುವ ಹೈಕೋರ್ಟ್, ಈ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಹಾಗೂ ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.
ಡಿ.ಕೆ.ರವಿ ಅವರ ಸ್ನೇಹಿತೆಯಾಗಿದ್ದ ಮಹಿಳಾ ಐಎಎಸ್ ಅಧಿಕಾರಿ ಪತಿ, ಸಿಐಡಿ ಸಿಬ್ಬಂದಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು.
ತನಿಖೆ ಪೂರ್ಣಗೊಳ್ಳದೆ ಮಧ್ಯಂತರ ವರದಿ ಸಲ್ಲಿಸುವುದು ಸರಿಯಲ್ಲ ಎಂದು ಮಹಿಳಾ ಐಎಎಸ್ ಅಧಿಕಾರಿ ಪತಿ ಪರ ವಕೀಲರು ವಾದ ಮಂಡಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ನೀಡಿರುವ ಪ್ರಾಥಮಿಕ ತನಿಖಾ ವರದಿಯ ಸಂಪೂರ್ಣ ವಿವರನ್ನು ಸೋಮವಾರ ಸದನಕ್ಕೆ ನೀಡಲಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಮಹಿಳಾ ಐಎಎಸ್ ಅಧಿಕಾರಿ ಪತಿ ಹೈಕೋರ್ಟ್ ಮೊರೆ ಹೋಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


