ಲೀ ಕೌನ್ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಸಿಂಗಪುರದ ಸಂಸ್ಥಾಪಕ ಪಿತಾಮಹ ಹಾಗೂ ಮೊದಲ ಪ್ರಧಾನಿ ಲೀ ಕೌನ್ ಯೂ ಅವರು ಅಗಲಿಕೆಗೆ ಭಾರತ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಿಂಗಪುರದ ಸಂಸ್ಥಾಪಕ ಪಿತಾಮಹ ಹಾಗೂ ಮೊದಲ ಪ್ರಧಾನಿ ಲೀ ಕೌನ್ ಯೂ ಅವರು ಅಗಲಿಕೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ ಹಾಗೂ ಲೀ ಅವರು ನಾಯಕರ ನಡುವಿನ ಸಿಂಹ ಎಂದು ಬಣ್ಣಿಸಿದ್ದಾರೆ.
"ದೂರದೃಷ್ಟಿಯಿದ್ದ ಮಹಾನಾಯಕ ಮತ್ತು ನಾಯಕರ ನಡುವಿನ ಸಿಂಹ, ಮಿ. ಲೀ ಕೌನ್ ಯೂ ಅವರ ಜೀವನ ಎಲ್ಲರಿಗೂ ಪಾಠವಾಗಬಲ್ಲದು. ಅವರ ಸಾವಿನ ಸುದ್ದಿ ಅತೀವ ದುಃಖ ತಂದಿದೆ" ಎಂದು ಅವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
"ಈ ಶೋಕಾಚರಣೆಯ ಸಂದರ್ಭದಲ್ಲಿ, ಲೀ ಅವರ ಕುಟುಂಬ ಮತ್ತು ಸಿಂಗಪುರದ ಜನತೆಯ ಜೊತೆಗೆ ಪ್ರಾರ್ಥನೆ ಸಲ್ಲಿಸುತ್ತೇನೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ" ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಲೀ ಅವರು ತೀವ್ರ ನ್ಯುಮೋನಿಯಾ ಖಾಯಿಲೆಯಿಂದ ಬಳಲಿ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


