ರವಿ ನನ್ನ ಪತ್ನಿಗೆ ಕಾಲ್ ಮಾಡಿದ್ದು 4 ಬಾರಿ ಮಾತ್ರ, 44 ಅಲ್ಲ: ಮಹಿಳಾ ಐಎಎಸ್ ಅಧಿಕಾರಿ ಪತಿ
ನಿಗೂಢವಾಗಿ ಸಾವನ್ನಪ್ಪದಿ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರು ನನ್ನ ಪತ್ನಿಗೆ ಕೇವಲ ನಾಲ್ಕು ಬಾರಿ ಮಾತ್ರ ಕಾಲಿ ಮಾಡಿದ್ದಾರೆ. 44 ಬಾರಿ ಅಲ್ಲ ಎಂದು ವಿಚಾರಣೆ...

ಬೆಂಗಳೂರು: ನಿಗೂಢವಾಗಿ ಸಾವನ್ನಪ್ಪದಿ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರು ನನ್ನ ಪತ್ನಿಗೆ ಕೇವಲ ನಾಲ್ಕು ಬಾರಿ ಮಾತ್ರ ಕಾಲ್ ಮಾಡಿದ್ದಾರೆ. 44 ಬಾರಿ ಅಲ್ಲ ಎಂದು ವಿಚಾರಣೆ ಮಹಿಳಾ ಐಎಎಸ್ ಅಧಿಕಾರಿ ಪತಿ ಹೇಳಿದ್ದಾರೆ.
ಸಿಐಡಿ ಮಧ್ಯಂತರ ವರದಿ ಬಹಿರಂಗಕ್ಕೆ ತಡೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಮಹಿಳಾ ಅಧಿಕಾರಿ ಪತಿ ಈ ವಿಷಯ ಸ್ಪಷ್ಟಪಡಿಸಿರುವುದು ಇದೀಗ ಬಯಲಾಗಿದೆ.
ರಿಟ್ ಅರ್ಜಿ ವಿಚಾರಣೆ ವೇಳೆ ಮಹಿಳಾ ಐಎಎಸ್ ಅಧಿಕಾರಿ ಪತಿ ಪರ ವಾದ ಮಂಡಿಸಿದ ಸಜ್ಜನ್ ಪೂವಯ್ಯ ಅವರು, ಡಿ.ಕೆ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದರು. ಇದೇ ಮಾಹಿತಿಯನ್ನು ಆಧರಿಸಿ ಮಾಧ್ಯಮಗಳು ಸಹ ವರದಿ ಮಾಡಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಡಿ.ಕೆ. ರವಿ ಅವರು ಸಾಯುವ ಮುನ್ನ ಮಹಿಳಾ ಐಎಎಸ್ ಅಧಿಕಾರಿಗೆ 44 ಬಾರಿ ಕಾಲ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ ಒಂದು ಗಂಟೆಯಲ್ಲಿ 44 ಬಾರಿ ಕರೆ ಮಾಡಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ರವಿ ಮಹಿಳಾ ಅಧಿಕಾರಿಗೆ ಕರೆ ಮಾಡಿದಾಗ ಅವರ ಪತಿ ಕೂಡಾ ಜೊತೆಯಲ್ಲೇ ಇದ್ದರು, ರವಿ ನಾಲ್ಕ ಬಾರಿ ಮಾತ್ರ ಕರೆ ಮಾಡಿದ್ದರು, 44 ಬಾರಿ ಅಲ್ಲ ಎಂದು ವಕೀಲರು ಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟರು.
ವಾಗ ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿದಾರರ ಪರ ವಕೀಲರಿಗೆ ಕೌಂಟರ್ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನಾಳೆ ಮುಂದೂಡಿದರು.
ಡಿ.ಕೆ.ರವಿ ಅವರು ಮಹಿಳಾ ಐಎಎಸ್ ಅಧಿಕಾರಿಯೊಬ್ಬರಿಗೆ 44 ಬಾರಿ ದೂರವಾಣಿ ಕರೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಸಿಎಂ ಅದನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


