ಮಾಜಿ ಪ್ರಧಾನಿಗೆ ರಿಲೀಫ್: ಮನಮೋಹನ್ ಸಿಂಗ್ ಸಮನ್ಸ್‌ಗೆ ಸುಪ್ರೀಂ ತಡೆ
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾರಿ ಮಾಡಿದ್ದ ಸಮನ್ಸ್‌ಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಸಂಬಂಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾರಿ ಮಾಡಿದ್ದ ಸಮನ್ಸ್‌ಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.
ತಮ್ಮ ವಿರುದ್ಧದ ಸಮನ್ಸ್ ರದ್ದು ಮಾಡುವಂತೆ ಕೋರಿ ಸಿಂಗ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿಂಗ್ ಸೇರಿದಂತೆ ಇತರೆ ಐವರಿಗೆ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದೆ. ಅಲ್ಲದೆ ಈ ಸಂಬಂಧ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಉದ್ಯಮಿ ಕುಮಾರ ಮಂಗಲಂ, ಪಿ.ಸಿ.ಪಾರಕ್ ಸೇರಿ 6 ಜನರಿಗೆ ಹಾಗೂ ಹಿಂಡಾಲ್ಕೋ ಸಂಸ್ಥೆಗೆ ಸೇರಿದ 8 ಕಂಪನಿಗಳಿಗೆ ಮಾ.11 ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಅಲ್ಲದೆ, ಮನಮೋಹನ್ ಸಿಂಗ್ ಅವರನ್ನು ಹಲವು ಬಾರಿ ವಿಚಾರಣೆಗೊಳಪಡಿಸಿತ್ತು.
ಸಿಬಿಐ ಜಾರಿ ಮಾಡಿದ ಸಮನ್ಸ್ ಕುರಿತಂತೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು, ಸಿಬಿಐ ಜಾರಿ ಮಾಡಿರುವ ಸಮನ್ಸ್ ಕಾನೂನು ಬದ್ಧವಾಗಿಲ್ಲ. ಸಿಬಿಐ ಅಧಿಕಾರಿಗಳು ಕಾನೂನು ರೀತಿಯ ನಿಯಮಗಳನ್ನು ಪಾಲಿಸಿಲ್ಲ. ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಅಪರಾಧ ವಿಭಾಗದಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಮನ್ಸ್ ಜಾರಿ ಮಾಡಿರುವ ಸಿಬಿಐ ಕ್ರಮ ಸರಿಯಲ್ಲ. ಸಿಬಿಐ ಅವರು ಜಾರಿ ಮಾಡಿರುವ ಸಮನ್ಸ್ ನ್ನು ರದ್ದು ಮಾಡುವಂತೆ ಕೋರಿ ಮನಮೋಹನ್ ಸಿಂಗ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


