ಗ್ರಾಪಂ ಚುನಾವಣೆ ದಿನಾಂಕ ಪ್ರಕಟ, ಮೇ 29, ಜೂನ್ 2ರಂದು ಮತದಾನ
ರಾಜ್ಯ ಚುನಾವಣಾ ಆಯೋಗ ಮಂಗಳವಾರ ಗ್ರಾಮ ಪಂಚಾಯತ್ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ....

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಂಗಳವಾರ ಗ್ರಾಮ ಪಂಚಾಯತ್ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ರಾಜ್ಯದ 5844 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ಅವರು, ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮೇ 11ರಂದು ಅಧಿಸೂಚನೆ ಹೊರಡಿಸಲಾಗುವುದು ಮತ್ತು ಮೇ 10ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದರು.
ಮೇ 18 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ 19 ನಾಮಪತ್ರ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಮೇ 21 ಕೊನೆಯ ದಿನವಾಗಿದೆ ಎಂದು ಅವರು ಹೇಳಿದರು
ಮೊದಲ ಹಂತದಲ್ಲಿ ಮೈಸೂರು, ಚಿಕ್ಕಮಗಳೂರು, ಕೊಡಗು, ಮಂಡ್ಯ, ಉಡುಪಿ, ಹಾಸನ, ದಕ್ಷಿಣ ಕನ್ನಡ, ಹಾವೇರಿ, ಗದಗ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ ಹಾಗೂ ಚಾಮರಾಜನಗರದಲ್ಲಿ ಚುನಾವಣೆ ನಡೆಯಲಿದೆ.
ಇನ್ನು ಎರಡನೇ ಹಂತದ ಚುನಾವಣೆಗೆ ಮೇ 15ಕ್ಕೆ ಅಧಿಸೂಚನೆ ಪ್ರಕಟ, ಮೇ 22 ನಾಮಪತ್ರ ಸಲ್ಲಿಕೆಗೆ ಕೊನೆ ದಿನ, ಮೇ 23 ನಾಮಪತ್ರ ಪರಿಶೀಲನೆ, ಮೇ 25 ನಾಮಪತ್ರ ಹಿಂಪಡೆಯಲು ಕೊನೆ ದಿನ, ಜೂನ್ 2 ಮತದಾನ ನಡೆಯಲಿದೆ ಎಂದು ವಿವರಿಸಿದರು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ತುಮಕೂರು, ಬೀದರ್, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಹಾಗೂ ರಾಯಚೂರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


