ಕಾಂಗ್ರೆಸ್ ಸರ್ಕಾರ ಕೆಳಗಿಳಿಸಲು ಅಸಾಧ್ಯ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಜೆಡಿಎಸ್ ಎಂದಿಗೂ ಇಳಿಸಲು ಸಾಧ್ಯವಿಲ್ಲ. ಜೆಡಿಎಸ್ ವಾಮಮಾರ್ಗ ಅನುಸರಿಸಿದ ಮಾತ್ರಕ್ಕೆ ಸರ್ಕಾರವನ್ನು ಕೆಳಗಿಸುವುದು ಸಾಧ್ಯವಿಲ್ಲ....

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಜೆಡಿಎಸ್ ಎಂದಿಗೂ ಇಳಿಸಲು ಸಾಧ್ಯವಿಲ್ಲ. ಜೆಡಿಎಸ್ ವಾಮಮಾರ್ಗ ಅನುಸರಿಸಿದ ಮಾತ್ರಕ್ಕೆ ಸರ್ಕಾರವನ್ನು ಕೆಳಗಿಸುವುದು ಸಾಧ್ಯವಿಲ್ಲ. ಅಷ್ಟೇ ಏಕೆ, ಜೆಡಿಎಸ್ ಎಂದಿಗೂ ಅಧಿಕಾರ ಹಿಡಿಯುವುದಕ್ಕೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿರುಗೇಟು ನೀಡಿದ್ದಾರೆ.
`ಅಧಿಕಾರ ಹಿಡಿಯಲು ಸಾಧ್ಯವಿಲ್ಲದಿರಬಹುದು. ಆದರೆ, ಅಧಿಕಾರದಿಂದ ಕಾಂಗ್ರೆಸ್ ಸರ್ಕಾರವನ್ನು ಇಳಿಸುವ ಶಕ್ತಿಯಿದೆ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಮಾಧ್ಯಮ ಸಂವಾದದಲ್ಲಿ ಹೇಳಿದ್ದರು. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿದ ನಂತರ ಸುದ್ದಿಗಾರರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.
ಈ ಸರ್ಕಾರ ಜನರಿಂದ ಆಯ್ಕೆಯಾಗಿರುವ ಸರ್ಕಾರ. ಇದನ್ನು ಅಷ್ಟು ಸುಲಭವಾಗಿ ಕೆಳಗಿಸಲು ಸಾಧ್ಯವಿಲ್ಲ. ಪ್ರತಿಪಕ್ಷಗಳು ಇತ್ತೀಚೆಗೆ ಏಕೋ ಏನೋ ಭೂಗಳ್ಳರ ಬಗ್ಗೆ ಮಾತನಾಡಲು
ಆರಂಭಿಸಿವೆ. ಪ್ರತಿಪಕ್ಷ ನಾಯಕರು ಸದನದ ಒಳಗೆ ಒತ್ತುವರಿ ತೆರವು ಮಾಡಿ ಎನ್ನುತ್ತಾರೆ. ಹೊರಗೆ ಬಂದು ಒತ್ತುವರಿ ಬೇಡ ಎಂದು ಸರ್ಕಾರದ ವಿರುದ್ಧ ಮಾತನಾಡುತ್ತಾರೆ. ಇವರಿಗೆ ಏನು ಹೇಳುವುದು ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


