ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ದಾವೋಸ್ ಮಾದರಿಯ ಸಮ್ಮೇಳನ : ಮುಫ್ತಿ ಮಹಮ್ಮದ್ ಸಯೀದ್
ಜಮ್ಮು-ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ನಡೆಸಲು ಉದ್ದೇಶಿಸಿರುವ ದಾವೋಸ್ ಮಾದರಿಯ ಸಮ್ಮೇಳನ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಬೇಕು....

ಶ್ರೀನಗರ: ಜಮ್ಮು-ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ನಡೆಸಲು ಉದ್ದೇಶಿಸಿರುವ ದಾವೋಸ್ ಮಾದರಿಯ ಸಮ್ಮೇಳನ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಬೇಕೆಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮಹಮ್ಮದ್ ಸಯೀದ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರವನ್ನು ವಿಶ್ವದ ನಂ.1 ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಸ್ವಿಜರ್ಲೆಂಡ್ ನ ದಾವೋಸ್ ನಲ್ಲಿ ನಡೆದ ಸಮ್ಮೇಳನದ ಮಾದರಿಯ ಕಾರ್ಯಕ್ರಮವನ್ನು ಗುಲ್ಮಾರ್ಗ್ ಅಥವಾ ಶ್ರೀನಗರದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ದೇಶದ ಉದ್ದಿಮೆದಾರರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಬೇಕು ಎಂದು ಮುಫ್ತಿ ಮಹಮ್ಮದ್ ಸಯೀದ್ ಮನವಿ ಮಾಡಿದ್ದಾರೆ.
ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ಮೊದಲ ಬಾರಿಗೆ ನಡೆದ ಟ್ರಾವೆಲ್ ಮಾರ್ಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಮುಫ್ತಿ ಮಹಮ್ಮದ್ ಸಯೀದ್, ಜಮ್ಮು-ಕಾಶ್ಮೀರವನ್ನು ಶಾಂತಿ ದ್ವೀಪ ಎಂದು ಬಣ್ಣಿಸಿದ್ದು ರಾಜ್ಯವನ್ನು ವಿಶ್ವದಲ್ಲೇ ಅತ್ಯುನ್ನತ ಪ್ರವಾಸಿ ತಾಣವಾಗಿ ನೋಡಬೇಕೆಂಬುದು ತಮ್ಮ ಕನಸು ಎಂದಿದ್ದಾರೆ.
ರಾಜ್ಯದಲ್ಲಿ ಪ್ರಕ್ಷುಬ್ಧ ಸ್ಥಿತಿ ಉಂಟಾಗಿದ್ದಾರೂ ಪ್ರವಾಸಿಗರಿಗೆ ಎಂದಿಗೂ ತೊಂದರೆ ಉಂಟಾಗಿಲ್ಲ. ಆದ್ದರಿಂದ ಜಮ್ಮು-ಕಾಶ್ಮೀರ ಶಾಂತಿ ದ್ವೀಪವಾಗಿದೆ. ತಮ್ಮ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಿ ವಿಶ್ವದ ನಂ.1 ಪ್ರವಾಸಿ ತಾಣವಾಗುವ ಕನಸನ್ನು ನನಸು ಮಾಡುವುದಾಗಿ ಮುಫ್ತಿ ಮಹಮ್ಮದ್ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


