ಒಂದಂಕಿ ಲಾಟರಿ ಹಗರಣದ ಮಾಹಿತಿ ಕೊಡಿ: ಸರ್ಕಾರಕ್ಕೆ ಗವರ್ನರ್ ಸೂಚನೆ
ಒಂದಂಕಿ ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡ ಕ್ರಮ ಸೇರಿದಂತೆ ಹಗರಣದ ಸಂಪೂರ್ಣ ಮಾಹಿತಿ ನೀಡುವಂತೆ...

ಬೆಂಗಳೂರು: ಒಂದಂಕಿ ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡ ಕ್ರಮ ಸೇರಿದಂತೆ ಹಗರಣದ ಸಂಪೂರ್ಣ ಮಾಹಿತಿ ನೀಡುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ರಾಜ್ಯದಲ್ಲಿ ಇಷ್ಟು ದೊಡ್ಡ ಹಗರಣ ನಡೆದಿದ್ದರು ರಾಜಭವನಕ್ಕೆ ಯಾವುಗದೇ ಮಾಹಿತಿ ನೀಡಿಲ್ಲ. ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿನ ವರದಿ ಮೂಲಕ ತಿಳಿದಿದೆ. ಆ ನಿಟ್ಟಿನಲ್ಲಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಸೂಚಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಶನಿವಾರವಷ್ಟೇ ಅಮಾನತುಗೊಳಿಸಲಾಗಿತ್ತು. ಅಲ್ಲದೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರ ಆಪ್ತ ಸಹಾಯಕನಾಗಿದ್ದ ನಾಗರಾಜ್ ಅವರನ್ನು ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


