ಒಂದಂಕಿ ಲಾಟರಿ ಹಗರಣ: ಸಿಬಿಐ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಬಹುಕೋಟಿ ಒಂದಂಕ್ಕಿ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯ ಲಾಟರಿ ಹಗರಣದ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಆದರೆ ಹಗರಣದಲ್ಲಿ ಐಪಿಎಸ್ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಈಗಾಗಲೇ ಲಾಟರಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರ ಆಪ್ತ ಸಹಾಯಕನಾಗಿದ್ದ ನಾಗರಾಜ್ ಅವರನ್ನುರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಐಜಿ ಮಟ್ಟದ ಆರು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


