ಪ್ರಧಾನ ಸುದ್ದಿ

ಜೂನ್ 1ರಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಜೂನ್ 1ರಂದು ವೃತ್ತಿಪರಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿಲಿದೆ.

ಜೂನ್ 1ರಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಜೂನ್ 1ರಂದು ವೃತ್ತಿಪರಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿಲಿದೆ.

ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕೆಇಎ ಆಡಳಿತಾಧಿಕಾರಿ ಎಸ್.ಎನ್.ಗಂಗಾಧರಯ್ಯ ಅವರು, ಜೂನ್ 1ರಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.  

ಜೂನ್ 3 ಹಾಗೂ 4ರಂದು ವಿಕಲಚೇತನ, ಎನ್‌ಸಿಸಿ ಹಾಗೂ ಕ್ರೀಡಾ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳ ಪರಿಶೀಲನೆ, ಜೂನ್ 5ರಿಂದ 20ರವರೆಗೆ ಸಾಮಾನ್ಯ ವರ್ಗದ ದಾಖಲೆ ಪರಿಶೀಲನೆ ನಡೆಸಲಾಗುವುದು ಮತ್ತು ಜೂನ್ 13ರಿಂದ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸುತ್ತೇವೆ ಎಂದು ಗಂಗಾಧರಯ್ಯ ಅವರು ತಿಳಿಸಿದ್ದಾರೆ.

ಈಗಾಗಲೇ ಪ್ರಕಟಿಸಲಾಗಿದ್ದ ವೇಳಾಪಟ್ಟಿಯನ್ವಯ ಫಲಿತಾಂಶ ಮಂಗಳವಾರ ಹೊರಬೀಳಬೇಕಿತ್ತು. ಆದರೆ, ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಯಲ್ಲಾದ ಗೊಂದಲದಿಂದ ದಿನಾಂಕವನ್ನು ಸರ್ಕಾರ ಮುಂದೂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.