ಪ್ರಧಾನ ಸುದ್ದಿ

ಮೈಸೂರು ಮಹಾರಾಜನ ಪಟ್ಟ ಅಲಂಕರಿಸಿದ ಯದುವೀರ

ದಿ.ಶ್ರೀಕಂಠದತ್ತ ಒಡೆಯರ್ ಹಾಗೂ ರಾಣಿ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗುರುವಾರ ಮೈಸೂರಿನ...

ಮೈಸೂರು ಮಹಾರಾಜನ ಪಟ್ಟ ಅಲಂಕರಿಸಿದ ಯದುವೀರ
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
Published On :

ಮೈಸೂರು: ದಿ.ಶ್ರೀಕಂಠದತ್ತ ಒಡೆಯರ್ ಹಾಗೂ ರಾಣಿ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗುರುವಾರ ಮೈಸೂರಿನ ಮಹಾರಾಜನಾಗಿ ಹಾಗೂ ಯದುವಂಶದ 27ನೇ ದೊರೆಯನ್ನಾಗಿ ಪಟ್ಟಾಭಿಷೇಕ ಮಾಡಲಾಯಿತು.

ಅಂಬಾವಿಲಾಸ ಅರಮನೆಯಲ್ಲಿ ಇಂದು ಬೆಳಗ್ಗೆ 9.30ರಿಂದ 10.15ರೊಳಗೆ ಸಲ್ಲುವ ಶುಭಲಗ್ನದಲ್ಲಿ ನೂತನ ರಾಜ ಯದುವೀರ್ ಗೆ ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಲಾಯಿತು.

ಯದುವಂಶದ ಸಂಪ್ರದಾಯದಂತೆ ಎಲ್ಲ ರೀತಿಯ ಪೂಜೆಗಳನ್ನು ನೆರವೇರಿಸಿದ ನಂತರ ಚಿನ್ನದ ಪಟ್ಟಿಯನ್ನು ಯದುವೀರ ಅವರಿಗೆ ಕಟ್ಟುವ ಮೂಲಕ ಪಟ್ಟಾಭಿಷೇಕ ಮಾಡಲಾಯಿತು. ಬಳಿಕ ಯದುವೀರ ಅವರಿಗೆ ನವಗ್ರಹ ಪೂಜೆ, ಪುರುಷಸೂಕ್ತ, ಶ್ರೀಸೂಕ್ತ ಇದ್ಯಾತಿ ಮಂತ್ರದಿಂದ ಪ್ರೋಕ್ಷಣೆ ಮಾಡಲಾಯಿತು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದ ಪ್ರಾತಾಪ ಸಿಂಹ, ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಹಲವು ಗಣ್ಣಯರು ಭಾಗಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.