ಪ್ರಧಾನ ಸುದ್ದಿ

ಚೂರಿ ಹಿಡಿದು ಸಿಎಂ ನಿವಾಸಕ್ಕೆ ಬಂದ ವ್ಯಕ್ತಿಯ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಚೂರಿ ಹಿಡಿದ ಬಂದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿಗಳು ಬಂಧಿಸಿರುವ ಘಟನೆಯೊಂದು ಸೋಮವಾರ ನಡೆದಿದೆ...

ಚೂರಿ ಹಿಡಿದು ಸಿಎಂ ನಿವಾಸಕ್ಕೆ ಬಂದ ವ್ಯಕ್ತಿಯ ಬಂಧನ
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಚೂರಿ ಹಿಡಿದ ಬಂದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿಗಳು ಬಂಧಿಸಿರುವ ಘಟನೆಯೊಂದು ಸೋಮವಾರ ನಡೆದಿದೆ.

ಅರ್ಜಿ ನೀಡಲೆಂದು ವ್ಯಕ್ತಿಯೊಬ್ಬ ಮುಖ್ಯಮಂತ್ರಿಗಳ ನಿವಾಸ ಕಾವೇರಿಗೆ ಬಂದಿದ್ದಾನೆ. ಈ ವೇಳೆ ಭದ್ರತಾ ಸಿಬ್ಬಂದಿಗಳು ಆತನನ್ನು ತಪಾಸಣೆಗೊಳಪಡಿಸಿದಾಗ ಜೇಬಿನಲ್ಲಿ ಚಾಕು ಇರುವುದು ಕಂಡುಬಂದಿದೆ. ಕೂಡಲೇ ಆತನ್ನು ಸಿಬ್ಬಂದಿಗಳು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ. ಪ್ರಸ್ತುತ ವ್ಯಕ್ತಿಯನ್ನು ಹೈಗ್ರೌಂಡ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಮೂಲಗಳ ಪ್ರಕಾರ ಬಂಧಿತ ವ್ಯಕ್ತಿಯೊಬ್ಬ ಮಾನಸಿಕ ಅಸ್ವಸ್ಥನಾಗಿದ್ದಾನೆಂದು ಹೇಳಲಾಗುತ್ತಿದ್ದು, ಬಂಧಿತನಿಂದ ಇದೀಗ ಅಧಿಕಾರಿಗಳು ಗುರುತಿನ ಪತ್ರವನ್ನು ಪಡೆದುಕೊಂಡಿದ್ದಾರೆ. ಅಲ್ಲದೇ, ಚೂರಿಹಿಡಿದು ಬರಲು ಕಾರಣ ಹಾಗೂ ಉದ್ದೇಶ ಕುರಿತಂತೆ ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.