ಪ್ರಧಾನ ಸುದ್ದಿ

ಸಿಎಂ ರುಂಡ ಚೆಂಡಾಡುತ್ತೇನೆ ಎಂದಿದ್ದ ಬಿಜೆಪಿ ನಾಯಕನ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗಕ್ಕೆ ಬಂದು ಗೋಮಾಂಸ ತಿಂದರೆ, ಅವರ ರುಂಡ ಚೆಂಡಾಡುವುದಾಗಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ...

ಸಿಎಂ ರುಂಡ ಚೆಂಡಾಡುತ್ತೇನೆ ಎಂದಿದ್ದ ಬಿಜೆಪಿ ನಾಯಕನ ಬಂಧನ
ಬಿಜೆಪಿ ನಾಯಕ ಚೆನ್ನಬಸಪ್ಪ
Published On :

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗಕ್ಕೆ ಬಂದು ಗೋಮಾಂಸ ತಿಂದರೆ, ಅವರ ರುಂಡ ಚೆಂಡಾಡುವುದಾಗಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಎಸ್.ಎನ್. ಚೆನ್ನಬಸಪ್ಪ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಿವಮೊಗ್ಗ ನಗರಸಭೆ ಮಾಜಿ ಅಧ್ಯಕ್ಷ ಚೆನ್ನಬಸಪ್ಪ ಅವರ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಾಯಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದರು.

ಕಾಂಗ್ರೆಸ್ ದೂರಿನನ್ವಯ ಚೆನ್ನಬಸಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಶಿವಮೊಗ್ಗ ದೊಡ್ಡಪೇಟೆ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಡಿವೈಎಸ್‌ಪಿ ರಾಮಅರಸಿದ್ದಿ ನೇತೃತ್ವದಲ್ಲಿ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ.

ಗೋಮಾಂಸ ಸೇವನೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ವಿರೋಧಿಸಿ ಬಿಜೆಪಿ ವತಿಯಿಂದ ಶಿವಮೊಗ್ಗದ ಗೋಪಿ ವೃತ್ತದಲ್ಲಿ ಪ್ರತಿಭಟನೆಯೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಚೆನ್ನಬಸಪ್ಪ ಅವರು, ಅವರಿಗೆ ನಿಜಕ್ಕೂ ಧೈರ್ಯವಿದ್ದರೆ ಶಿವಮೊಗ್ಗದ ಗೋಪಿ ವೃತ್ತಕ್ಕೆ ಬಂದು ಗೋಮಾಂಸ ತಿಂದಿದ್ದೇ ಆದರೆ, ಅವರ ರುಂಡವನ್ನು ಕಡಿದು ಚೆಂಡಾಡುವುದಕ್ಕೂ ನಾವು ಎರಡನೇ ಬಾರಿ ಯೋಚಿಸುವುದಿಲ್ಲ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.