ಮೋದಿ ಕಾಶ್ಮೀರ ಭೇಟಿ; ಕಾಶ್ಮೀರದಲ್ಲಿ ಮೊಬೈಲ್ ಅಂತರ್ಜಾಲ ಸೇವೆ ಸ್ಥಗಿತ
ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಕಣಿವೆದಾದ್ಯಂತ ಮೊಬೈಲ್ ಅಂತರ್ಜಾಲ ಸೇವೆಗಳನ್ನು ರದ್ದು ಮಾಡಲಾಗಿದೆ.

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಕಣಿವೆದಾದ್ಯಂತ ಮೊಬೈಲ್ ಅಂತರ್ಜಾಲ ಸೇವೆಗಳನ್ನು ರದ್ದು ಮಾಡಲಾಗಿದೆ.
ಇದ್ದಕ್ಕಿದ್ದಂತೆ ಮೊಬೈಲ್ ಇಂಟರ್ನೆಟ್ ಸೇವೆಗಳು ಸ್ಥಗಿತಗೊಂಡದ್ದರಿಂದ ಸೇವೆ ಒದಗಿರುವ ಸಂಸ್ಥೆಗಳಿಗೆ ಜನರು ಪ್ರಶ್ನಿಸಿದ್ದಾರೆ.
ಭದ್ರತಾ ಎಚ್ಚರಿಕೆಯಿಂದಾಗಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಗುಪ್ತಚರ ಅಧಿಕಾರಿ ತಿಳಿಸಿದ್ದಾರೆ.
"ಶ್ರೀನಗರದಲ್ಲಿ ಪ್ರಧಾನಿಯವರ ರ್ಯಾಲಿ ಮುಗಿಯುವವರಿಗೆ ಸೇವೆಗಳು ಬಂದ್ ಆಗಿರುತ್ತವೆ" ಎಂದು ಮೂಲಗಳು ತಿಳಿಸಿವೆ.
ಮೋದಿ ಭೇಟಿಯ ವಿರುದ್ಧ ಶ್ರೀನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪಕ್ಷೇತರ ಶಾಸಕ ಎಂಜಿನಿಯರ್ ರಶೀದ್ ಅವರನ್ನು ಬಂಧಿಸಲಾಗಿದೆ.
"ವಾಪಸ್ ಹೋಗಿ! ಮೋದಿ, ವಾಪಸ್ ಹೋಗಿ" ಎಂದು ಎಂಜಿನಿಯ ರಶೀದ್ ಘೋಷಣೆ ಮೊಳಗಿಸಿ ಪ್ರತಿಭಟಿಸುತ್ತಿದ್ದಾಗ ಎಚ್ಚರಿಕೆಯ ದೃಷ್ಟಿಯಿಂದ ನಗರದ ಜವಾಹರ್ ನಗರ ಪ್ರದೇಶದಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


