ಒರಿಸ್ಸಾದ ಜಗನ್ನಾಥ ದೇವಾಲಯದಲ್ಲಿ ಕಾಲ್ತುಳಿತ; ಒಂದು ಸಾವು
ಒರಿಸ್ಸಾದ ಪೂರಿ ಜಗನ್ನಾಥ ದೇವಾಲಯದ ಮುಂಭಾಗದಲ್ಲಿ ಕಾಲ್ತುಳಿದಂತಹ ವಾತಾವರಣ ಸೃಷ್ಟಿಯಾಗಿ ಬುಧವಾರ ವಯಸ್ಕರೊಬ್ಬರು ಮೃತಪಟ್ಟಿದ್ದಾರೆ.

ಭುವನೇಶ್ವರ: ಒರಿಸ್ಸಾದ ಪೂರಿ ಜಗನ್ನಾಥ ದೇವಾಲಯದ ಮುಂಭಾಗದಲ್ಲಿ ಕಾಲ್ತುಳಿದಂತಹ ವಾತಾವರಣ ಸೃಷ್ಟಿಯಾಗಿ ಬುಧವಾರ ವಯಸ್ಕರೊಬ್ಬರು ಮೃತಪಟ್ಟಿದ್ದಾರೆ.
ದೇವಾಸ್ಥಾನದ ದ್ವಾರದ ಮುಂದೆ ಜಮಾಯಿಸಿದ್ದ ಅತಿ ದೊಡ್ಡ ಸರತಿ ಸಾಲಿನಲ್ಲಿ ನಿಂತಿದ್ದ ನಿಧಿ ಬೆಹೆರಾ ಎಂಬುವರು ಬಿಸಿಲಿಗೆ ಹಾಗೂ ನುಕಾಟದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಕೊನೆಯುಸಿರೆಳೆದರು ಎಂದು ಕೂಡ ಪೊಲೀಸರು ಹೇಳಿದ್ದಾರೆ.
'ಪಾಯಾ ಶ್ರದ್ಧಾ' ಅಂಗವಾಗಿ ಲಕ್ಷಾಂತರ ಭಕ್ತರು ಪೂರಿ ಜಗನ್ನಾಥ ದೇವಾಲಯದ ಎದುರು ನೆರೆದಿದ್ದರು ಆದರೇ ಯಾವುದೇ ದೊಡ್ಡ ದುರ್ಘಟನೆ ಸಂಭವಿಸಿಲ್ಲ ಎಂದು ಪೂರಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವನಬಿಹಾರಿ ಸಾಹು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


