ಪ್ರಧಾನ ಸುದ್ದಿ

ಮಾಜಿ ಸಚಿವ, ಶಾಸಕ ಗುರುಪಾದಪ್ಪ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಬೀದರ್ ನ ಕೆಜೆಪಿ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಇಂದು ಬೆಳಿಗ್ಗೆ...

ಮಾಜಿ ಸಚಿವ, ಶಾಸಕ ಗುರುಪಾದಪ್ಪ ವಿಧಿವಶ
ಗುರುಪಾದಪ್ಪ ನಾಗಮಾರಪಲ್ಲಿ
Published On :
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬೀದರ್ ನ ಕೆಜೆಪಿ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ಹೃದಯಘಾತವಾಗಿದ್ದರಿಂದ ಗುರುಪಾದಪ್ಪ(74) ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಸತತ ಮೂರು ದಶಕಗಳ ಕಾಲ ಸಕ್ರಿಯವಾಗಿ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಗುರುಪಾದಪ್ಪ ಅವರು 6 ಬಾರಿ ಶಾಸಕರಾಗಿ, 3 ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್, ಜನತಾದಳದಿಂದಲೂ ಶಾಸಕರಾಗಿದ್ದರು. 
ಇಂದು ವಿಮಾನದಲ್ಲಿ ಬೀದರ್ ಗೆ ಪಾರ್ಥೀವ ಶರೀರವನ್ನು ರವಾನೆ ಮಾಡಲಾಗುತ್ತದೆ, ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ನಾಳೆ ಬೆಳಗ್ಗೆ 11ಕ್ಕೆ ಹುಟ್ಟೂರು ಚಿಂತಾಕಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹುಮ್ನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.