ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನವಂಬರ್ 23ರವರಗೆ ಎಸ್‌ಐಟಿ ವಶಕ್ಕೆ
ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಮತ್ತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಮೂರು ದಿನಗಳ ಕಾಲ...

ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಮತ್ತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಮೂರು ದಿನಗಳ ಕಾಲ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ವಶಕ್ಕೆ ಒಪ್ಪಿಸಲಾಗಿದೆ.
ಇಂದು ಬೆಳಗ್ಗೆ ಬೆಂಗಳೂರಿನ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದ ರೆಡ್ಡಿ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ನವೆಂಬರ್ 23ರವರೆಗೆ ಎಸ್ಐಟಿ ವಶಕ್ಕೆ ನೀಡಿದೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಈಗಾಗಲೇ 13 ಪ್ರಕರಣಗಳಲ್ಲಿ ಜಾಮೀನು ಪಡೆದಿರುವ ರೆಡ್ಡಿ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಮತ್ತೊಂದು ಹೊಸ ಪ್ರಕರಣ ದಾಖಲಿಸಿದ್ದು, ಆ ಪ್ರಕರಣದ ವಿಚಾರಣೆಗಾಗಿ ಇಂದು ವಶಕ್ಕೆ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


