ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮನೆ ಜಪ್ತಿ
ವಿತರಕರಿಗೆ ವಂಚಿಸಿದ ಆರೋಪ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಚಿತ್ರ ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ...

ಬೆಂಗಳೂರು: ವಿತರಕರಿಗೆ ವಂಚಿಸಿದ ಆರೋಪ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಚಿತ್ರ ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ಮನೆಯನ್ನು ಜಪ್ತಿ ಮಾಡಲಾಗಿದೆ.
ನ್ಯಾಯಾಲಯದ ಸಿಬ್ಬಂದಿ ಶುಕ್ರವಾರ ಸಂಜಯನಗರದಲ್ಲಿರುವ ರಾಜೇಂದ್ರ ಸಿಂಗ್ ಬಾಬು ಅವರ ಮನೆಗೆ ತೆರಳಿ ಜಪ್ತಿ ಮಾಡಿದರು. ಈ ವೇಳೆ ಅವರ ಪುತ್ರ ನಟ ಆದಿತ್ಯ ಅವರು ವಕೀಲರ ಜತೆ ಮಾತಿನ ಚಕಮಕಿ ನಡೆಸಿದರು. ನಂತರ ಮನೆಗೆ ಬೀಗ ಹಾಕಿಕೊಂಡು ಕಾರಿನಲ್ಲಿ ತೆರಳಿದರು. ಹೀಗಾಗಿ ಸಿಬ್ಬಂದಿ ಜಪ್ತಿ ಕಾರ್ಯ ನಿಲ್ಲಿಸಿ ಈ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡಿದರು.
ಚೆಕ್‍ಬೌನ್ಸ್ ಪ್ರಕರಣ: 2012ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರು ತಮ್ಮ ಪುತ್ರ ಆದಿತ್ಯ ನಾಯಕನಾಗಿ ನಟಿಸಿದ್ದ `ಮೋಹಿನಿ' ಚಿತ್ರ ವಿತರಣೆಗಾಗಿ ನವಶಕ್ತಿ ಎಂಟರ್‍ಪ್ರೈಸ್ ಮಾಲೀಕ ನಾಗರಾಜ್ ಅವರಿಂದ 6.28 ಲಕ್ಷ ರೂಪಾಯಿ ಮುಂಗಡ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


