ಮರಳು ಮಾಫಿಯಾ ವಿರುದ್ಧ ಕಠಿಣ ಕ್ರಮ: ಪರಮೇಶ್ವರ
ರಾಜ್ಯದಲ್ಲಿ ಮರಳು ಮಾಫಿಯಾ ಬಹಳ ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಇದನ್ನು ಹತ್ತಿಕ್ಕುವ ಕೆಲಸವನ್ನು ತಮ್ಮ ಇಲಾಖೆ ನಿರ್ದಾಕ್ಷಿಣ್ಯವಾಗಿ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್..

ಬೆಂಗಳೂರು: ರಾಜ್ಯದಲ್ಲಿ ಮರಳು ಮಾಫಿಯಾ ಬಹಳ ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಇದನ್ನು ಹತ್ತಿಕ್ಕುವ ಕೆಲಸವನ್ನು ತಮ್ಮ ಇಲಾಖೆ ನಿರ್ದಾಕ್ಷಿಣ್ಯವಾಗಿ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟವಾದ ಮಾತುಗಳಲ್ಲಿ ಹೇಳಿದ್ದಾರೆ.
ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮರಳು ಮಾಫಿಯಾ ಬಲಿಷ್ಠವಾಗಿ ಬೆಳೆದಿದೆ. ಈ ಮಾಫಿಯಾಕ್ಕೆ ಯಾರ್ಯಾರ ಆಶ್ರಯವಿದೆ, ಯಾರ್ಯಾರು ಸಹಕಾರ ಕೊಡುತ್ತಿದ್ದಾರೆ ಎಂಬುದನ್ನು ಇಲ್ಲಿ ಮಾತನಾಡಲು ಸಾಧ್ಯವಿಲ್ಲ. ಆದರೆ ಕಾನೂನು ಚೌಕಟ್ಟಿನಲ್ಲಿ ಯಾವ ರೀತಿಯ ನಿಯಂತ್ರಣ ಮಾಡಬೇಕೆಂದು ತಮಗೆ ಗೊತ್ತಿದೆ ಎಂದರು. ಕಾನೂನು ಬದ್ಧವಾಗಿ ಮರಳು ಸಾಗಣೆ, ಸಂಗ್ರಹಣೆ ಮಾಡಬೇಕಾಗುತ್ತದೆ. ಅದನ್ನು ಮೀರಿ ಅಕ್ರಮವಾಗಿ ನಡೆಸಿದರೆ ಅದನ್ನು ಖಂಡಿತವಾಗಿ ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದ ಅವರು, ಅಧಿಕಾರಿಗಳ ಮೇಲೆ ಹಲ್ಲೆ ಮಾಡುವ ಘಟನೆ ರಾಜ್ಯದ ಅನೇಕ ಕಡೆ ನಡೆದಿದೆ. ಇದನ್ನೂ ಕೂಡ ಸರ್ಕಾರ ಸಹಿಸುವುದಿಲ್ಲ ಎಂದರು.
ರಿಯಾಲಿಟಿ ಶೋಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಇಲಾಖೆಯೊಡನೆ ಚರ್ಚಿಸಿ ತೀರ್ಮಾನಿಸಲಾಗುವುದು. ಕಾನೂನು ಮಿತಿ ದಾಟಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
-ಡಾ.ಜಿ.ಪರಮೇಶ್ವರ್ ಗೃಹ ಸಚಿವ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


