ಪ್ರಧಾನ ಸುದ್ದಿ

ಜೈಲಿಗೆ ರೆಡ್ಡಿ ಆಪ್ತ ಅಲಿ ಖಾನ್

ಅಕ್ರಮ ಅದಿರು ಗಣಿಗಾರಿಕೆ, ಸಾಗಣೆ ಹಾಗೂ ರಫ್ತು ಪ್ರಕರಣ ಸಂಬಂಧ ಎಸ್‍ಐಟಿ ಅಧಿಕಾರಿಗಳಿಂದ ಬಂಧಿತರಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತ ಮೆಹಫೂಜ್

ಜೈಲಿಗೆ ರೆಡ್ಡಿ ಆಪ್ತ ಅಲಿ ಖಾನ್
ಗಣಿಗಾರಿಕೆ
Published On :
ಬೆಂಗಳೂರು: ಅಕ್ರಮ ಅದಿರು ಗಣಿಗಾರಿಕೆ, ಸಾಗಣೆ ಹಾಗೂ ರಫ್ತು ಪ್ರಕರಣ ಸಂಬಂಧ ಎಸ್‍ಐಟಿ ಅಧಿಕಾರಿಗಳಿಂದ ಬಂಧಿತರಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತ ಮೆಹಫೂಜ್ ಅಲಿ ಖಾನ್‍ರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ.27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಶನಿವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಲಿಖಾನ್‍ರನ್ನು ಪೊಲೀಸರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ನ. 27ರವರೆಗೆ ನ್ಯಾಯಾಂಗ ವಶಕ್ಕೆ ನೀಡಿತು. ಬಳ್ಳಾರಿ ವನಹಳ್ಳಿಯಲ್ಲಿ ಬ್ಲ್ಯಾಕ್ ಗೋಲ್ಡ್ ಮೈನ್ಸ್ ಹಾಗೂ ಮಿನರಲ್ಸ್ ಸಂಸ್ಥೆ ಗಣಿಗಾರಿಕೆ ಲೀಸ್ ಅವಧಿ ಮುಕ್ತಾಯಗೊಂಡಿದ್ದರೂ ಅಕ್ರಮವಾಗಿ ಗಣಿಗಾರಿಕೆ ಮಾಡಿ ರಫ್ತು ಮಾಡಲಾಗಿತ್ತು. ಈ ಸಂಬಂಧ ಅಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ಗಣಿಗಾರಿಕೆ ವರದಿ ಪಾರ್ಟ್-2 ಸಲ್ಲಿಸಿದ್ದರು. ಈ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಎಸ್‍ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಸುಮಾರು 2 ಲಕ್ಷ ಟನ್ ಅದಿರನ್ನು ರಫ್ತು ಮಾಡಿರುವ ಆರೋಪದ ಮೇಲೆ ಶುಕ್ರವಾರ ಅಲಿಖಾನ್‍ನನ್ನು ಬಂಧಿಸಿದ್ದು, ಶನಿವಾರ ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಎಸ್‍ಐಟಿ ಮುಖ್ಯಸ್ಥ ಚರಣ್ ರೆಡ್ಡಿ ತಿಳಿಸಿದ್ದಾರೆ. ಅಕ್ರಮ ಅದಿರು ರಫ್ತು ಪ್ರಕರಣ ಸಂಬಂಧ ಅಲಿಖಾನ್‍ಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಅದರಂತೆ ವಿಚಾರಣೆಗೆ ಆಗಮಿಸಿದ್ದ ವೇಳೆ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸೂಕ್ತ ಉತ್ತರ ಮತ್ತು ದಾಖಲೆಗಳನ್ನು ಒದಗಿಸದ ಕಾರಣ ಬಂಧಿಸಲಾಯಿತು. ಹೆಚ್ಚಿನ ವಿಚಾರಣೆಗೊಳಪಡಿಸುವ ಅಗತ್ಯಬಿದ್ದರೆ ತಮ್ಮ ವಶಕ್ಕೆ ಪಡೆದು ಮಾಹಿತಿ ಪಡೆದುಕೊಳ್ಳಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.
ರೆಡ್ಡಿ ವಿಚಾರಣೆ ಜನಾರ್ದನರೆಡ್ಡಿ ಅವರನ್ನು ಶುಕ್ರವಾರವಷ್ಟೇ ಬಂಧಿಸಿ ನ.26ರವರೆಗೆ ತಮ್ಮ ವಶಕ್ಕೆ ಪಡೆದಿರುವ ಎಸ್‍ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು. ಬ್ಲಾಕ್ ಗೋಲ್ಡ್ ಮೈನ್ಸ್ ಕಂಪನಿ ಮೂಲಕ ನಡೆಸಿರುವ ಅಕ್ರಮ ಗಣಿಗಾರಿಕೆ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ವಿಚಾರಣೆ ವೇಳೆ ಪೆÇಲೀಸರಿಗೆ ರೆಡ್ಡಿ ಅವರು ಸಹಕರಿಸಿದ್ದು, ಪೆÇಲೀಸರ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.