ಪ್ರಧಾನ ಸುದ್ದಿ

ಉಪ ಲೋಕಾಯುಕ್ತ ಅಡಿ ಪದಚ್ಯುತಿಗೆ ಕಾಂಗ್ರೆಸ್ ಮನವಿ

ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಅವರನ್ನು ಪದಚ್ಯುತಿಗೊಳಿಸುವಂತೆ ಕಾಂಗ್ರೆಸ್ ಶಾಸಕರು ಸ್ಪೀಕರ್ ಕಾಗೋಡು ತಿಮ್ಮಪ್ಪ...

ಉಪ ಲೋಕಾಯುಕ್ತ ಅಡಿ ಪದಚ್ಯುತಿಗೆ ಕಾಂಗ್ರೆಸ್ ಮನವಿ
ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ
Published On :

ಬೆಂಗಳೂರು: ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಅವರನ್ನು ಪದಚ್ಯುತಿಗೊಳಿಸುವಂತೆ ಕಾಂಗ್ರೆಸ್ ಶಾಸಕರು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಸೋಮವಾರ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿದ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ ಹಾಗೂ ಇತರೆ ಕಾಂಗ್ರೆಸ್ ಶಾಸಕರು ಪದಚ್ಯುತಿ ನಿರ್ಣಯ ಮಂಡನೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.


ಸುಭಾಷ್‌ ಬಿ ಅಡಿ ಅವರ ಪದಚ್ಯುತಿ ಪ್ರಸ್ತಾವನೆಗೆ ಕಾಂಗ್ರೆಸ್‌ನ 78 ಶಾಸಕರು ಸಹಿ ಹಾಕಿದ್ದು, ನಿರ್ಣಯ ಮಂಡನೆಗೆ ಅವಕಾಶ ನೀಡುವಂತೆ ಸ್ಪೀಕರ್ ಮನವಿ ಸಲ್ಲಿಸಲಾಗಿದೆ. ಆದರೆ ಇದಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದು, ಸ್ಪೀಕರ್ ಅವಕಾಶ ನೀಡಲಿದ್ದಾರೆ? ಎಂಬುದು ಕುತೂಹಲ ಮೂಡಿಸಿದೆ.


ಈ ಹಿಂದೆ ಉಪ ಲೋಕಾಯುಕ್ತರಾಗಿದ್ದ ಎಸ್‌.ಬಿ.ಮಜಗೆ ಅವರು ಸುಭಾಷ್‌ ಅಡಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಈ ಆರೋಪಗಳ ಆಧಾರದ ಮೇಲೆ ಅವರನ್ನು ಪದಚ್ಯುತಿಗೊಳಿಸುವ ನಿರ್ಣಯವನ್ನು ಮಂಡನೆ ಮಾಡಲು ಕಾಂಗ್ರೆಸ್ ಮನವಿ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.