ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಡಿ.3ರವರೆಗೆ ನ್ಯಾಯಾಂಗ ಬಂಧನ
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ)ದಿಂದ ಮತ್ತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಲೋಕಾಯುಕ್ತ ವಿಶೇಷ...

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ)ದಿಂದ ಮತ್ತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಕಳೆದ ಶುಕ್ರವಾರ ರೆಡ್ಡಿಯನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ನವೆಂಬರ್ 23ರವರೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇಂದು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗೆ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬ್ಲಾಕ್ ಬೋರ್ಡ್ ಮೈನ್ಸ್ ಕಂಪನಿ ಹೆಸರಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಮತ್ತು ಅದಿರು ರಫ್ತು ಮಾಡಿದ ಆರೋಪದ ಮೇಲೆ ರೆಡ್ಡಿ ಅವರನ್ನು ಮತ್ತೆ ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


