ಪ್ರಧಾನ ಸುದ್ದಿ

ಮೋದಿ ಬಗ್ಗೆ ಟೀಕೆ: ವಿದ್ಯಾರ್ಥಿಗಳ ಎದುರು ಮುಜುಗರಕ್ಕೊಳಗಾದ ರಾಹುಲ್

ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಬೆಂಬಲಿಗರಿಂದ ಚಪ್ಪಾಳೆಗಿಟ್ಟಿಸಿಕೊಂಡು ಬಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಕೂಡ ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ನಡೆದ ಸಂವಾದದಲ್ಲಿಯೂ ಮೋದಿ ವಿರುದ್ಧ ಟೀಕೆ ಮಾಡಿದ್ದು, ಈ ಬಾರಿ ಚಪ್ಪಾಳೆ ಬದಲು ಮುಜುಗರಕ್ಕೊಳಗಾರಿರುವ...

ಮೋದಿ ಬಗ್ಗೆ ಟೀಕೆ: ವಿದ್ಯಾರ್ಥಿಗಳ ಎದುರು ಮುಜುಗರಕ್ಕೊಳಗಾದ ರಾಹುಲ್
ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿರುವ ರಾಹುಲ್
Published On :

ಬೆಂಗಳೂರು: ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಬೆಂಬಲಿಗರಿಂದ ಚಪ್ಪಾಳೆಗಿಟ್ಟಿಸಿಕೊಂಡು ಬಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಕೂಡ ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ನಡೆದ ಸಂವಾದದಲ್ಲಿಯೂ ಮೋದಿ ವಿರುದ್ಧ ಟೀಕೆ ಮಾಡಿದ್ದು, ಈ ಬಾರಿ ಚಪ್ಪಾಳೆ ಬದಲು ಮುಜುಗರಕ್ಕೊಳಗಾರಿರುವ ಘಟನೆ ನಡೆದಿದೆ.

ಇಂದು ನಗರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿಯವರು ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ್ದಾರೆ. ಸಂವಾದದಲ್ಲಿ ರಾಹುಲ್ ಮೋದಿಯವರ ವಿರುದ್ಧ ಟೀಕೆ ಮಾಡಲು ಪ್ರಾರಂಭಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಬಳಿ ಸ್ವಚ್ಛ ಭಾರತ ಅಭಿಯಾನ ಕಾರ್ಯ ನಿರ್ವಹಿಸುತ್ತಿದೆಯೇ ಎಂದು ರಾಹುಲ್ ವಿದ್ಯಾರ್ಥಿಗಳಿಗೆ ಪ್ರಶ್ನೆ ಹಾಕಿದ್ದಾರೆ. ಇದಕ್ಕುತ್ತರಿಸಿದ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಹೌದು ಉತ್ತಮವಾಗಿ ಯಶಸ್ಸು ಕಂಡಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಪ್ರತಿಕ್ರಿಯೆ ಕಂಡು ವಿಚಲಿತರಾದ ರಾಹುಲ್ ಮತ್ತೆ ಮೇಕ್ ಇನ್ ಇಂಡಿಯಾ ಹಾಗೂ ಸ್ವಚ್ಛ ಭಾರತ ಅಭಿಯಾನ ಮತ್ತಿತರ ಯೋಜನೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಮರುಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ವಿದ್ಯಾರ್ಥಿಗಳು ಮೊದಲಿನಂತೆಯೇ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳ ಪ್ರತಿಕ್ರಿಯೆ ಕಂಡ ರಾಹುಲ್ ಮತ್ತೆ ಯಾವುದೇ ಪ್ರಶ್ನೆ ಕೇಳದೆ ಮೂಕರಾದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.